HEALTH TIPS

ಎಸ್‌ಐಆರ್ ಬಳಿಕ 12 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾರರ ಸಂಖ್ಯೆ 6 ಕೋಟಿಗೂ ಅಧಿಕ ಇಳಿಕೆ: ವರದಿ

ನವದೆಹಲಿ: 9 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (ಯುಟಿ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಶುಕ್ರವಾರ ಪೂರ್ಣಗೊಂಡಿದ್ದು, ಒಟ್ಟು ಮತದಾರರ ಸಂಖ್ಯೆ ಸುಮಾರು 6.8ಕೋಟಿಗಳಷ್ಟು ಇಳಿಕೆಯಾಗಿದೆ.


ಉತ್ತರ ಪ್ರದೇಶದ ಅಂತಿಮ ಮತದಾರರ ಪಟ್ಟಿಯು ಶುಕ್ರವಾರ ಬಿಡುಗಡೆಗೊಳ್ಳುವುದರೊಂದಿಗೆ ಎರಡನೇ ಹಂತದ ಎಸ್‌ಐಆರ್ ಪೂರ್ಣಗೊಂಡಿದೆ.

ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸ್‌ಗಡ, ಕೇರಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಗುಜರಾತ್, ಮಧ್ಯಪ್ರದೇಶ ಮತ್ತು ಗೋವಾಗಳ ಅಂತಿಮ ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಈ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳು ಮತ್ತು ಚುನಾವಣಾ ಆಯೋಗ ಹಂಚಿಕೊಂಡ ಮಾಹಿತಿಗಳ ಪ್ರಕಾರ, ಕಳೆದ ವರ್ಷದ ಅ.27ರಂದು ಎಸ್‌ಐಆರ್ ಪ್ರಕ್ರಿಯೆಯನ್ನು ಘೋಷಿಸಿದಾಗ ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಒಟ್ಟು ಸುಮಾರು 51 ಕೋಟಿ ಮತದಾರರನ್ನು ಹೊಂದಿದ್ದವು. ಎಸ್‌ಐಆರ್ ಬಳಿಕ ಸುಮಾರು 44.92 ಮತದಾರರಿದ್ದು, 6.8 ಕೋಟಿಯಷ್ಟು ಇಳಿಕೆಯಾಗಿದೆ.ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆದಿತ್ತು.

ಈ ತಿಂಗಳು ಐದು ವಿಧಾನಸಭಾ ಚುನಾವಣೆಗಳ ಬಳಿಕ ಉಳಿದ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭಗೊಳ್ಳುವ ಸಾಧ್ಯತೆಯಿದ್ದು, ಇವು ಒಟ್ಟು 40 ಕೋಟಿ ಮತದಾರರನ್ನು ಹೊಂದಿವೆ.

ಅಸ್ಸಾಂನಲ್ಲಿ ಎಸ್‌ಐಆರ್ ಬದಲಿಗೆ 'ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ' ಫೆ.10ರಂದು ಪೂರ್ಣಗೊಂಡಿದೆ.









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries