ಮಥುರಾ: ಇಲ್ಲಿನ ಯುಮುನಾ ನದಿಯಲ್ಲಿ ದೋಣಿ ಮಗುಚಿದ ಪರಿಣಾಮ ಮೃತಪಟ್ಟವರ ಪೈಕಿ ಮತ್ತಿಬ್ಬರ ಶವಗಳು ಭಾನುವಾರ ಪತ್ತೆಯಾಗಿವೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಮೃತರನ್ನು ಡಿಂಕಿ ಬನ್ಸಾಲ್ ಹಾಗೂ ರಿಷಬ್ ಶರ್ಮಾ ಎಂದು ಗುರುತಿಸಲಾಗಿದ್ದು, ರಿಷಬ್ ಅವರ ಶವವು ದುರಂತ ನಡೆದ ಸ್ಥಳದಿಂದ 3 ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. ಜತೆಗೆ ದುರಂತದ ವೇಳೆ ಕಾಣೆಯಾಗಿರುವ ಇನ್ನೂ ಮೂವರ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದೂ ಹೇಳಿದ್ದಾರೆ.

