ಪಟ್ನಾ: ಬಿಹಾರದಲ್ಲಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಯು ಏಪ್ರಿಲ್ 13ರ ನಂತರ ಆರಂಭವಾಗಲಿದೆ ಎಂದು ಜೆಡಿಯು ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಸಂಜಯ್ ಕುಮಾರ್ ಝಾ ಅವರು ಭಾನುವಾರ ತಿಳಿಸಿದ್ದಾರೆ.
'ಹೊಸ ಸರ್ಕಾರ ಏಪ್ರಿಲ್ 13ರ ನಂತರ ಜಾರಿಗೆ ಬರುತ್ತದೆ ಎಂದು ಭಾವಿಸುತ್ತೇನೆ' ಎಂದು ಝಾ ಹೇಳಿದರು.
'ಎನ್‌ಡಿಎ ಶಾಸಕರು ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ. ಹೊಸ ಸರ್ಕಾರ ರಚನೆಯಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸಲಿದೆ' ಎಂದು ಜೆಡಿಯು ಹಿರಿಯ ನಾಯಕ ಮತ್ತು ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಸುದ್ದಿಗಾರರಿಗೆ ತಿಳಿಸಿದರು. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದರಿಂದ ಬಿಹಾರದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಯಾಗಬೇಕಾಗಿದೆ. ಹೊಸ ಸರ್ಕಾರದ ನೇತೃತ್ವವನ್ನು ಬಿಜೆಪಿ ವಹಿಸುವ ಸಾಧ್ಯತೆ ಇದೆ. ಬಿಜೆಪಿಯಲ್ಲೂ ಈ ಸಂಬಂಧ ಚಟುವಟಿಕೆ ಬಿರುಸಾಗಿವೆ.

