ಮೇದಿನಿನಗರ: ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬುಧವಾರ ತೇರ್ಹಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾವಿಯೊಂದರಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಬಾಲಕಿಯ ಅಜ್ಜ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಅದರಲ್ಲಿ ಮೂವರ ಹೆಸರನ್ನು ಉಲ್ಲೇಖಿಸಲಾಗಿದೆ.ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೇದಿನಿರಾಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಎಂಎಂಸಿಎಚ್) ಕಳುಹಿಸಲಾಗಿದೆ ಎಂದು ಲೆಸ್ಲಿಗಂಜ್ ಎಸ್‌ಡಿಪಿಒ ಮನೋಜ್ ಝಾ ತಿಳಿಸಿದ್ದಾರೆ.
ಮೇಲ್ನೋಟಕ್ಕೆ ಇದು ಪ್ರೇಮ ಪ್ರಕರಣದಂತೆ ಕಂಡುಬರುತ್ತಿದೆ ಎಂದು ತೇರ್ಹಾಸಿ ಪೊಲೀಸ್ ಠಾಣಾ ಉಸ್ತುವಾರಿ ಆನಂದ್ ರಾಮ್ ಹೇಳಿದ್ದಾರೆ.
ಘಟನೆಗೆ ನಿಖರ ಕಾರಣ ಪತ್ತೆ ಮಾಡಲು ಸಮಗ್ರ ತನಿಖೆ ನಡೆಸಲಾಗುತ್ತಿದೆ. ಜತೆಗೆ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

