HEALTH TIPS

ಗುಜರಾತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ: 16 ಕಾರ್ಮಿಕರಿಗೆ ಗಂಭೀರ ಗಾಯ

 ಜಗಡಿಯಾ: ಗುಜರಾತ್‌ನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕನಿಷ್ಠ 16 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಗುಜರಾತ್ ಕೈಗಾರಿಕಾ ಅಭಿವೃದ್ಧಿ ನಿಗಮ(ಜಿಐಡಿಸಿ) ಪ್ರದೇಶದಲ್ಲಿರುವ ಮೆಟ್ರೋಪಾಲಿಟನ್ ಎಕ್ಸಿಮ್‌ಕೆಮ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸ್ ಉಪ ಅಧೀಕ್ಷಕ ಅಜಯ್ ಮೀನಾ ತಿಳಿಸಿದ್ದಾರೆ.

ದುರಂತದಲ್ಲಿ ಕನಿಷ್ಠ 16 ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈವರೆಗೆ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ತುರ್ತು ಕಾರ್ಯಾಚರಣೆ ತಂಡಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ವಾಹನಗಳು ಮತ್ತು ಆಯಂಬುಲೆನ್ಸ್‌ ಅನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಮೀನಾ ಮಾಹಿತಿ ನೀಡಿದ್ದಾರೆ.

ಬೆಂಕಿಯನ್ನು ನಂದಿಸುವ ಪ್ರಯತ್ನಗಳು ಇನ್ನೂ ಮುಂದುವರಿದಿವೆ ಎಂದು ಅವರು ತಿಳಿಸಿದ್ದಾರೆ.

ಘಟನಾ ಸ್ಥಳದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ದಟ್ಟವಾದ ಕಪ್ಪು ಹೊಗೆ ಆವರಿಸಿಕೊಂಡಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries