HEALTH TIPS

ಪೆರಡಾಲ ದೇವಸ್ಥಾನದ ನವೀಕರಣ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ-ಏ.17ಕ್ಕೆ ಹಸಿರುವಾಣಿ ಮೆರವಣಿಗೆಯೊಂದಿಗೆ ಆರಂಭ; ಏ.26ಕ್ಕೆ ಬ್ರಹ್ಮಕಲಶಾಭಿಷೇಕ

ಬದಿಯಡ್ಕ: ಕುಂಬಳೆ ಸೀಮೆಯ ಪ್ರಮುಖ ಐದನೇ ಕ್ಷೇತ್ರವಾಗಿರುವ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನವು ಶ್ರೀ ವರದಾ ನದಿಯ ಸುಂದರ ಪರಿಸರದಲ್ಲಿ ನೆಲೆಯಾಗಿದ್ದು, ನವೀಕರಣ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಏಪ್ರಿಲ್ 17 ಶುಕ್ರವಾರದಿಂದ ಏಪ್ರಿಲ್ 28  ಮಂಗಳವಾರದ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ಎಡನೀರು ಮಠಾಧೀಶ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಪೂರ್ಣಾನುಗ್ರಹದೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ರವೀಶತಂತ್ರಿ ಕುಂಟಾರು ಇವರ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರಗಲಿರುವುದು. 


ಏಪ್ರಿಲ್ 17 ರಂದು ಬೆಳಗ್ಗೆ 9.30ಕ್ಕೆ ಕೆಡೆಂಜಿ ಶ್ರೀ ಮಹಾವಿಷ್ಣು ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ, ಏ.18 ರಂದು ನವೀಕರಿಸಿದ ರಾಜಗೋಪುರ, ರಾಜಾಂಗಣ ಮೇಲ್ಛಾವಣಿ ಮತ್ತು ನೂತನ ಭೋಜನ ಶಾಲೆ ಲೋಕಾರ್ಪಣೆ, ಏ.23 ರಂದು 108 ತೆಂಗಿನಕಾಯಿಯ ಗಣಪತಿ ಹೋಮ, ಶ್ರೀದೇವರ ಪ್ರತಿಷ್ಠೆ ನಡೆಯಲಿರುವುದು. ಏ.26 ರಂದು ಶ್ರೀ ದೇವರಿಗೆ ಸಹಸ್ರಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ನಡೆಯಲಿದೆ. ನಟರಾಜ ವೇದಿಕೆ ಹಾಗೂ ಕೈಲಾಸ ವೇದಿಕೆ ಎಂಬ ಎರಡು ಕಡೆಗಳಲ್ಲಿ ನಿತ್ಯ ವಿವಿಧ ತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಲಿವೆ. ಪ್ರತಿನಿತ್ಯ ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ನಾಡಿನ ಯತಿವರೇಣ್ಯರು, ಗಣ್ಯರು, ದಾನಿಗಳು, ವೇದಿಕೆಯನ್ನು ಅಲಂಕರಿಸಲಿದ್ದಾರೆ. ಪ್ರಸಿದ್ಧ ವಾಗ್ಮಿಗಳಿಂದ ಧಾರ್ಮಿಕ ಭಾಷಣ ನಡೆಯಲಿದೆ. ಒಟ್ಟು 12 ದಿನಗಳಲ್ಲಾಗಿ 3 ಲಕ್ಷದಷ್ಟು ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. 




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries