HEALTH TIPS

ಏ.18ರಿಂದ ಕಾಸರಗೋಡು ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

ಕಾಸರಗೋಡು: ಕಾಸರಗೋಡು ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಏ.18ರಿಂದ 23ರ ವರೆಗೆ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಪೂರ್ಣಾನುಗ್ರಹದೊಂದಿಗೆ ಶ್ರೀ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರ ದಿವ್ಯ ಪೌರೋಹಿತ್ಯದಲ್ಲಿ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. 


ಏ.18 ರಂದು ಬೆಳಗ್ಗೆ 7.30ಕ್ಕೆ ಗಣಪತಿ ಹವನ, ವಿವಿಧ ವೈದಿಕ ಕಾರ್ಯಕ್ರಮಗಳು, 8.30ಕ್ಕೆ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪ್ರಾರ್ಥನೆಗೈದು ಹಸಿರುವಾಣಿ ಹೊರೆಕಾಣಿಕೆ ಶೋಭಾಯಾತ್ರೆಗೆ ಚಾಲನೆ. 9 ಗಂಟೆಗೆ ಹಸಿರುವಾಣಿ ಹೊರೆಕಾಣಿಕೆ ಶೋಭಾಯಾತ್ರೆ ಕರಂದಕ್ಕಾಡು ಶ್ರೀ ವೀರಹನುಮಾನ್ ಮಂದಿರ ಪರಿಸರದಿಂದ ವಾದ್ಯಘೋಷಗಳೊಂದಿಗೆ ಭವ್ಯ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮನ, 11.30ಕ್ಕೆ ಉಗ್ರಾಣ ಮುಹೂರ್ತ, ಸಂಜೆ 4.30ಕ್ಕೆ ತಂತ್ರಿವರ್ಯ ಬ್ರಹ್ಮಶ್ರೀ 

ಉಳಿಯತ್ತಾಯ ವಿಷ್ಣು ಆಸ್ರ ಅವರಿಗೆ ಪೂರ್ಣಕುಂಭ ಸ್ವಾಗತ, 6.15ಕ್ಕೆ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರಿಗೆ ಪೂರ್ಣಕುಂಭ ಸ್ವಾಗತ, ಶ್ರೀ ಸನ್ನಿಧಿಯ ಗರ್ಭಗುಡಿ ಬಾಗಿಲಿಗೆ ಬೆಳ್ಳಿ ಹೊದಿಕೆ ಮತ್ತು ಗರ್ಭಗುಡಿಯ ಮುಂಭಾಗಕ್ಕೆ ಹಿತ್ತಾಳೆ ಹೊದಿಕೆ ಸಮರ್ಪಣೆ, 6.30ಕ್ಕೆ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ, ಧಾರ್ಮಿಕ ಸಭೆ, ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರಿಂದ ಆಶೀರ್ವಚನ ನೀಡುವರು, ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ತ್ರ ಹಾಗೂ ವಿವಿಧ ವಲಯಗಳ ಗಣ್ಯರು ಉಪಸ್ಥಿತರಿರುವರು. ರಾತ್ರಿ 7.30ಕ್ಕೆ ನಾದಮಯ ಬೋಧಿಬ್ರಹ್ಮ ಆರ್ಕೆಸ್ಟ್ರಾ ಜರಗಲಿದೆ. 

ಏ.19 ರಂದು ಬೆಳಗ್ಗೆ 7.30ಕ್ಕೆ ವಿವಿಧ ವೈದಿಕ ಕಾರ್ಯಕ್ರಮಗಳು, ವಿವಿಧ ಭಜನಾ ತಂಡಗಳಿಂದ ಭಜನೆ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮ, ಅಪರಾಹ್ನ 2ಕ್ಕೆ ಯಕ್ಷಗಾನ ತಾಳಮದ್ದಳೆ, ಸಂಜೆ 5ಕ್ಕೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಪೂರ್ಣಕುಂಭ ಸ್ವಾಗತ, 5.30ಕ್ಕೆ ಸಭಾ ಕಾರ್ಯಕ್ರಮ, ಒಡಿಯೂರು ಸ್ವಾಮೀಜಿಯವರಿಂದ ಆಶೀರ್ವಚನ, ರಾತ್ರಿ 7.30ಕ್ಕೆ ನಾಟ್ಯೋತ್ಸವಂ ಜರಗಲಿದೆ.  

ಏ.20 ರಂದು ಬೆಳಗ್ಗೆ ವಿವಿಧ ವೈದಿಕ ಕಾರ್ಯಕ್ರಮ, ವಿವಿಧ ತಂಡಗಳಿಂದ ಭಜನೆ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮ, ಸಂಜೆ 5ಕ್ಕೆ ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪೂರ್ಣಕುಂಭ ಸ್ವಾಗತ, 5.30ಕ್ಕೆ ಸಭಾ ಕಾರ್ಯಕ್ರಮ, ಕೊಂಡೆವೂರು ಸ್ವಾಮೀಜಿಯವರಿಂದ ಆಶೀರ್ವಚನ, ರಾತ್ರಿ 7.30ಕ್ಕೆ ನಾಗದಿಗಂಬರಿ ಮಲೆಯಾಳ ನಾಟಕ ಪ್ರದರ್ಶನಗೊಳ್ಳಲಿದೆ.

ಏ.21ರಂದು ಬೆಳಗ್ಗೆ ವಿವಿಧ ವೈದಿಕ ಕಾರ್ಯಕ್ರಮ, ವಿವಿಧ ತಂಡಗಳಿಂದ ಭಜನೆ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮ, ಸಂಜೆ 5.30ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ 7.30ಕ್ಕೆ ನೃತ್ಯ ವೈಭವ ಜರಗಲಿದೆ. 

ಏ.22ರಂದು ವಿವಿಧ ವೈದಿಕ ಕಾರ್ಯಕ್ರಮಗಳು, ವಿವಿಧ ಭಜನಾ ತಂಡಗಳಿಂದ ಭಜನೆ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮ, ಸಂಜೆ 5ಕ್ಕೆ ಶ್ರೀ ಮಾತಾ ಅಮೃತಾನಂದಮಯಿ ಮಠದ ಬ್ರಹ್ಮಚಾರಿ ಶ್ರೀ ವೇದ ವೇದಾಮೃತ ಚೈತನ್ಯ ಅವರಿಗೆ ಪೂರ್ಣಕುಂಭ ಸ್ವಾಗತ, 5.30ಕ್ಕೆ ಸಭಾ ಕಾರ್ಯಕ್ರಮ, ಶ್ರೀಗಳಿಂದ ಆಶೀರ್ವಚನ, ರಾತ್ರಿ 7.30ಕ್ಕೆ ಫ್ಯೂಷನ್ ಭಜನೆ ನಡೆಯಲಿದೆ. 

ಏ.23ರಂದು ಬೆಳಗ್ಗೆ 6 ಗಂಟೆಗೆ ಗಣಪತಿ ಹೋಮ, 7.30ಕ್ಕೆ ವಿವಿಧ ವೈದಿಕ ಕಾರ್ಯಕ್ರಮಗಳು, 7.34ರಿಂದ 9.37ರ ಮಧ್ಯ ವೃಷಭ ಲಗ್ನ ಶುಭಮುಹೂರ್ತದಲ್ಲಿ ಅಷ್ಟಬಂಧ ಲೇಪನ ಮತ್ತು ಬ್ರಹ್ಮಕಲಶಾಭಿಷೇಕ, ವಿವಿಧ ತಂಡಗಳಿಂದ ಭಜನೆ, 11.30ಕ್ಕೆ  ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರಿಗೆ ಪೂರ್ಣಕುಂಭ ಸ್ವಾಗತ, ಸಮಾರೋಪ ಸಮಾರಂಭ, ಎಡನೀರು ಶ್ರೀಗಳಿಂದ ಆಶೀರ್ವಚನ, ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರ ದಿವ್ಯ ಉಪಸ್ಥಿತಿ, ವಿವಿಧ ವಲಯಗಳ ಗಣ್ಯರು ಭಾಗವಹಿಸುವರು. ಸಂಜೆ 5ಕ್ಕೆ ಭರತನಾಟ್ಯ, ರಾತ್ರಿ 7 ಗಂಟೆಗೆ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

ಏ.24 ರಂದು ವಾರ್ಷಿಕ ಮಹೋತ್ಸವ

ವಾರ್ಷಿಕ ಮಹೋತ್ಸವದ ಅಂಗವಾಗಿ ಏ.24ರಂದು ಬೆಳಗ್ಗೆ 7.30ಕ್ಕೆ ವಿವಿಧ ವೈದಿಕ ಕಾರ್ಯಕ್ರಮ, ವಿವಿಧ ತಂಡಗಳಿಂದ ಭಜನೆ, 10 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ6ಕ್ಕೆ ತಾಯಂಬಕ, ರಾತ್ರಿ 7ಕ್ಕೆ ಶ್ರೀ ದೇವರ ಉತ್ಸವ ಬಲಿ, ಕಟ್ಟೆಪೂಜೆ ಜರಗಲಿದೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries