ನವದೆಹಲಿ: ಎನ್‌ಸಿಪಿ(ಎಸ್‌ಪಿ) ನಾಯಕ ಶರದ್ ಪವಾರ್ ಮತ್ತು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಸೇರಿದಂತೆ 19 ರಾಜ್ಯಸಭಾ ಸದಸ್ಯರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಸಭಾ ಸಭಾಪತಿ ಸಿ. ಪಿ. ರಾಧಾಕೃಷ್ಣನ್ ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಸಭೆಯಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಉಪಸಭಾಪತಿ ಹರಿವಂಶ್ ಸಿಂಗ್ ಮತ್ತು ಸಂಸದೀಯ ವ್ಯವಹಾರ ಸಚಿವ ಕಿರಣ್ ರಿಜುಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ತಮಿಳುನಾಡಿನಿಂದ ಆರು ಮಂದಿ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಿಂದ ತಲಾ ಐವರು ಮತ್ತು ಒಡಿಶಾದಿಂದ ಮೂವರು ಸದಸ್ಯರು ಹೊಸದಾಗಿ ಚುನಾಯಿತರಾಗಿದ್ದಾರೆ.

