ಕಾಸರಗೋಡು: ಮಹಾ ಶ್ರೀಚಕ್ರ ನವಾವರಣ ಪೂಜೆ ಮೇ 1ರಂದು ಮಧ್ಯಾಹ್ನ 2ಗಂಟೆಗೆ ಶ್ರೀ ಎಡನೀರು ಮಠದ ಸಭಾಂಗಣದಲ್ಲಿ ಜರುಗಲಿದೆ. ಎಡನೀರು ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಶುಭಾಶೀರ್ವಾದ ಹಾಗೂ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯುವುದು. ಬ್ರಹ್ಮಶ್ರೀ ಮುಲ್ಲಪ್ಪಳ್ಳಿ ಕೃಷ್ಣನ್ ನಂಬೂದಿರಿ ತಾಂತ್ರಿಕತ್ವ ವಹಿಸುವರು.
ಮಧ್ಯಾಹ್ನ 2ರಿಂದ ವಿದ್ವಾನ್ ಬಳ್ಳಪದವು ಯೋಗೀಶ ಶರ್ಮಾ ಮತ್ತು ಬಳಗದವರಿಂದ ನವಾವರಣ ಕೃತಿ ಆಲಾಪನೆ ನಡೆಯುವುದು. ವಿದ್ವಾನ್ ವಿಠಲ ರಾಮಮೂರ್ತಿ ಚೆನ್ನೈ ವಯಲಿನ್, ವಿದ್ವಾನ್ ಆನೂರು ಅನಂತಕೃಷ್ಣ ಶರ್ಮಾ ಬೆಂಗಳೂರು ಮೃದಂಗದಲ್ಲಿ ಸಹಕರಿಸುವರು. ಸಂಜೆ 6ರಿಂದ ಅಷ್ಟಾವಧಾನ ಕಾರ್ಯಕ್ರಮ, ರಾತ್ರಿ 7.30 ರಿಂದ ಮಹಾಪೂಜೆ ನಡೆಯುವುದು.



