HEALTH TIPS

2022ರ ದೆಹಲಿ ಗಲಭೆ: ಉಮರ್ ಖಾಲಿದ್‌ ಪುನರ್‌ ಪರಿಶೀಲನಾ ಅರ್ಜಿ ವಜಾ

ನವದೆಹಲಿ: ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆಗೆ ಪಿತೂರಿ ನಡೆಸಿದ ಆರೋಪದಡಿ ಬಂಧನಕ್ಕೊಳಗಾಗಿರುವ ಉಮರ್ ಖಾಲಿದ್‌, ತಮಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿದ್ದ ತೀರ್ಪನ್ನು ಪುನರ್‌ ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ಐವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಸುಪ್ರೀಂಕೋರ್ಟ್‌ ಉಮರ್‌ ಖಾಲಿದ್‌ ಮತ್ತು ಶರ್ಜೀಲ್‌ ಇಮಾಮ್‌ ಅವರಿಗೆ ಜಾಮೀನು ನಿರಾಕರಿಸಿ ಜನವರಿ 5ರಂದು ತೀರ್ಪು ಪ್ರಕಟಿಸಿತ್ತು. ಈ ತೀರ್ಪನ್ನು ‍ಪುನರ್‌ ಪರಿಶೀಲಿಸುವಂತೆ ಉಮರ್ ಮನವಿ ಮಾಡಿದ್ದರು.

ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್‌ ಹಾಗೂ ಎನ್‌.ವಿ ಅಂಜಾರಿಯಾ ಅವರಿದ್ದ ಪೀಠವು 'ಪುನರ್‌ ಪರಿಶೀಲನಾ ಅರ್ಜಿ ಮತ್ತು ಲಗತ್ತಿಸಲಾದ ದಾಖಲೆಗಳನ್ನು ಗಮನಿಸಿದ ಬಳಿಕ ಹಿಂದಿನ ತೀರ್ಪನ್ನು ಪರಿಶೀಸಲು ನಮಗೆ ಯಾವುದೇ ಕಾರಣ ಕಂಡುಬಂದಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಲಾಗಿದೆ' ಎಂದು ಹೇಳಿದೆ.

2020ರ ಫೆಬ್ರುವರಿಯಲ್ಲಿ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕಾನೂನುಗಳನ್ನು ವಿರೋಧಿಸಿ ನಡೆಸಿದ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ 53 ಜನರು ಸಾವಿಗೀಡಾಗಿದ್ದರು. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಈ ಪ್ರಕರಣದಲ್ಲಿ ಒಟ್ಟು 18 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ 11 ಮಂದಿಗೆ ಜಾಮೀನು ನೀಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries