ಉಪ್ಪಳ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿ.ಬಿ.ಎಸ್.ಸಿ) ನಡೆಸಿದ 2025-26ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಬಾಯಾರಿನ ಪ್ರಶಾಂತಿ ವಿದ್ಯಾಕೇಂದ್ರವು ಗಮನಾರ್ಹ ಸಾಧನೆ ಮಾಡಿದ್ದು, ಸತತ 21ನೇ ಬಾರಿಗೆ ಶೇಕಡಾ 100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಯಲ್ಲಿ ಭಾಗವಹಿಸಿದ್ದ ಒಟ್ಟು 90 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಇವರಲ್ಲಿ 51 ಮಂದಿ ಉನ್ನತ ಶ್ರೇಣಿಯಲ್ಲಿ, 34 ಮಂದಿ ಪ್ರಥಮ ಶ್ರೇಣಿಯಲ್ಲಿ ಹಾಗೂ 5 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕುಮಾರಿ ಕೀರ್ತನಾ.ಜಿ ಶೇಕಡಾ 99.2 ಅಂಕಗಳನ್ನು ಪಡೆದು ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

