ಪಟ್ನಾ: ಬಿಹಾರದ ನೂತನ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಎನ್‌ಡಿಎ ಸರ್ಕಾರವು ಏಪ್ರಿಲ್ 24ರಂದು ವಿಶ್ವಾಸಮತ ಸಾಬೀತು ಪಡಿಸಲಿದೆ ಎಂದು ಸರ್ಕಾರವು ಶನಿವಾರ ಪ್ರಕಟಣೆ ಹೊರಡಿಸಿದೆ.
ಜುಲೈನಲ್ಲಿ ವಿಧಾನಸಭೆಯ ಮಳೆಗಾಲದ ಅಧಿವೇಶನ ನಡೆಯಲಿದೆ. ಅದಕ್ಕೂ ಮುನ್ನ, ವಿಶ್ವಾಸಮತ ಸಲುವಾಗಿ ಒಂದು ದಿನದ ಅಧಿವೇಶನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಬಿಹಾರದ 24ನೇ ಮುಖ್ಯಮಂತ್ರಿಯಾಗಿ ಚೌಧರಿ ಅವರು ಏಪ್ರಿಲ್ 15ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿ ನಾಯಕರೊಬ್ಬರು ಬಿಹಾರದ ಮುಖ್ಯಮಂತ್ರಿಯಾಗಿರುವುದು ಇದೇ ಮೊದಲು.
ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿರುವ ನಿತೀಶ್ ಕುಮಾರ್ ಅವರು, ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ಏಪ್ರಿಲ್ 14ರಂದು ರಾಜೀನಾಮೆ ಸಲ್ಲಿಸಿದ್ದರು.
ಮೂರು ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿರುವ ಚೌಧರಿ, 9 ವರ್ಷಗಳ ಹಿಂದಷ್ಟೇ ಬಿಜೆಪಿ ಸೇರಿದ್ದರು.

