HEALTH TIPS

'ಬಿ28' ತಯಾರಿಕಾ ಕೇಂದ್ರಕ್ಕೆ ಅಶ್ವಿನಿ ವೈಷ್ಣವ್ ಚಾಲನೆ

 ಬೆಂಗಳೂರು: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬಿಇಎಂಎಲ್‌ನಲ್ಲಿ ನಿರ್ಮಿಸಿರುವ ಆದಿತ್ಯ ಹೈಸ್ಪೀಡ್ ಬುಲೆಟ್ ರೈಲು ಬಿ28 ಬೋಗಿ ಉತ್ಪಾದನಾ ಕೇಂದ್ರವನ್ನು ಶನಿವಾರ ಉದ್ಘಾಟಿಸಿದರು. 


ಬಿಇಎಂಎಲ್‌ನ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜತೆ ಸಂವಾದ ನಡೆಸಿ, ರೈಲ್ವೆ ಬೋಗಿ, ಮೆಟ್ರೊ ಬೋಗಿಗಳ ತಯಾರಿಕೆ ಕುರಿತು ಮಾಹಿತಿ ಪಡೆದುಕೊಂಡರು.

ರೈಲ್ವೆ ಬೋರ್ಡ್ ಅಧ್ಯಕ್ಷ ಸತೀಶ್ ಕುಮಾರ್, ಬಿಇಎಂಎಲ್‌ನ ವ್ಯವಸ್ಥಾಪಕ ನಿರ್ದೇಶಕ ಶಾಂತನು ರಾಯ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಅಶ್ವಿನಿ ವೈಷ್ಣವ್ ಮಾತನಾಡಿ, ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಮತ್ತು ಬಿಇಎಂಎಲ್ ಸಹಯೋಗದಲ್ಲಿ ಬುಲೆಟ್ ರೈಲು ಬಿ28 ಬೋಗಿಗಳನ್ನು ವಿನ್ಯಾಸಗೊಳಿಸಲಾಗುತ್ತಿದ್ದು, ಇದು ಆತ್ಮನಿರ್ಭರ ಭಾರತದ ಸ್ವದೇಶಿ ಬುಲೆಟ್ ರೈಲು ಆಗಿರಲಿದೆ. ಬಿಇಎಂಎಲ್‌ನ ಆದಿತ್ಯ ಘಟಕದಲ್ಲಿ ಇದರ ಉತ್ಪಾದನೆ ನಡೆಯಲಿದೆ. ಮುಂದಿನ ವರ್ಷದ ಆರಂಭದಲ್ಲಿ ಮೊದಲ ಮಾದರಿ (ಪ್ರೊಟೊಟೈಪ್) ನಿರೀಕ್ಷಿಸಲಾಗಿದ್ದು, 2027ರ ಅಂತ್ಯಕ್ಕೆ ಸಂಪೂರ್ಣವಾಗಿ ಸಿದ್ಧಗೊಳ್ಳಲಿದೆ ಎಂದರು.

ಪ್ರಸ್ತುತ ಸೇವೆಯಲ್ಲಿರುವ ವಂದೇ ಭಾರತ ಸ್ಲೀಪರ್ ರೈಲಿನ ಕುರಿತು ಪ್ರತಿಕ್ರಿಯಿಸಿದ ಸಚಿವರು, ಗುವಾಹಟಿ- ಕೋಲ್ಕತ್ತ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಯಾಣಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರಿನಿಂದ ಮಂಗಳೂರು ಮಾರ್ಗವಾಗಿ ಮಡಗಾಂವ್‌ವರೆಗೆ ರೈಲು ಸೇವೆಗೆ ಯೋಜಿಸಲಾಗಿದೆ. ಪ್ರಸ್ತುತ ಹಾಸನ-ಮಂಗಳೂರು ರೈಲ್ವೆ ಮಾರ್ಗದ ವಿದ್ಯುದ್ದೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ಅತಿ ಶೀಘ್ರದಲ್ಲೇ ವಂದೇ ಭಾರತ್ ರೈಲು ಸಂಚರಿಸಲಿದೆ. ಇದರ ಜೊತೆಗೆ ಬೆಂಗಳೂರು-ಮುಂಬೈ ಮಾರ್ಗದಲ್ಲಿ ಎರಡು ಸೂಪರ್ ಫಾಸ್ಟ್ ರೈಲುಗಳು ಕಾರ್ಯಾರಂಭ ಮಾಡಲಿವೆ. ಒಂದು ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಸಂಚರಿಸಲಿದೆ. ಮತ್ತೊಂದು ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಉಪನಗರ ರೈಲು ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಉತ್ತಮ ಪ್ರಗತಿ ಕಂಡು ಬಂದಿದೆ ಎಂದರು.

ವಾರ್ತಾ ಶಾಖೆಯ (ಪಿಐಬಿ) ಹೆಚ್ಚುವರಿ ಮಹಾನಿರ್ದೇಶಕ ಎಸ್.ಜಿ. ರವೀಂದ್ರ ಸ್ವಾಗತಿಸಿದರು.

ಅಶ್ವಿನಿ ವೈಷ್ಣವ್, ರೈಲ್ವೆ ಸಚಿವಹೈ ಸ್ಪೀಡ್ ರೈಲುಗಳು ದೊಡ್ಡ ಪರಿವರ್ತನೆ ತರಲಿದ್ದು, ಬೆಂಗಳೂರು-ಚೆನ್ನೈ ರೈಲು ಪ್ರಯಾಣದ ಸಮಯ 73 ನಿಮಿಷ ಆಗಲಿದೆ. ಇದು ಎರಡು ನಗರಗಳ ನಡುವಿನ ಸಂಪರ್ಕದ ಜಾಲವನ್ನು ಮತ್ತಷ್ಟು ಹೆಚ್ಚಿಸುತ್ತದೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries