HEALTH TIPS

ಕೇಂದ್ರ ಸರಕಾರಿ ನೌಕರರ ತುಟ್ಟಿಭತ್ತೆ ಶೇ.2ರಷ್ಚು ಹೆಚ್ಚಳ| ಸಂಪುಟ ಸಭೆ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ತೆಯನ್ನು ಶೇ.2ರಷ್ಟು ಏರಿಕೆ ಮಾಡಲು ಕೇಂದ್ರ ಸರಕಾರ ನಿರ್ಧರಿಸಿದೆ. ಹೊಸದಿಲ್ಲಿಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ತುಟ್ಟಿಭತ್ತೆ ಏರಿಕೆಗೆ ಅನುಮೋದನೆಯನ್ನು ನೀಡಲಾಗಿದೆ.

ಇದರೊಂದಿಗೆ ಪ್ರಸಕ್ತ ಶೇ.58ರಷ್ಟಿದ್ದ ಕೇಂದ್ರ ನೌಕರರ ತುಟ್ಟಿಭತ್ತೆಯು ಶೇ.60ಕ್ಕೇರಿದೆ.

ಭತ್ತೆಗಳ ಸಂರಚನೆಯಲ್ಲಿ ಪರಿಷ್ಕರಣೆಯಾಗಬೇಕೆಂಬ ಕೇಂದ್ರ ನೌಕರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸುವ ಪ್ರಯತ್ನ ಇದಾಗಿದೆಯೆಂದು ಅಧಿಕೃತ ಮೂಲಗಳು ತಿಳಿಸಿವೆ.

ಶೇ.2ರಷ್ಟು ತುಟ್ಟಿಭತ್ತೆ ಹೆಚ್ಚಳವು ಪಿಂಚಣಿದಾರರಿಗೂ ಅನ್ವಯವಾಗಲಿದ್ದು, ಶೇ.58ರಿಂದ ಶೇ.60ಕ್ಕೆ ಏರಿಕೆಯಾಗಲಿದೆ.

ಸರಕಾರಿ ನೌಕರರು ಹಾಗೂ ಪಿಂಚಣಿದಾರರ ಜೀವನವೆಚ್ಚ ಹೆಚ್ಚಳವನ್ನು ಹೊಂದಿಸಿಕೊಳ್ಳುವುದಕ್ಕಾಗಿ ಅವರಿಗೆ ತುಟ್ಚಿಭತ್ತೆಯನ್ನು ನೀಡಲಾಗುತ್ತಿದೆ. ನಿಗದಿತ ಆದಾಯದ ಮೇಲೆ ಹಣದುಬ್ಬರದ ಪ್ರಭಾವವನ್ನು ತಗ್ಗಿಸುವುದಕ್ಕಾಗಿ ತುಟ್ಟಿಭತ್ತೆಯನ್ನು ಹೆಚ್ಚಿಸಲಾಗುತ್ತದೆ.

ಇದಕ್ಕೂ ಮುನ್ನ 2025ರ ಆಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ 2025ರ ಜುಲೈ 1ರಿಂದ ಅನ್ವಯವಾಗುವಂತೆ ಶೇ.3ರಷ್ಟು ತುಟ್ಟಿಭತ್ತೆ ಏರಿಕೆಗೆ ಅನುಮೋದನೆ ನೀಡಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries