ತಮಿಳುನಾಡು: ಇನ್ನೇನು ಕೆಲವೇ ದಿನಗಳಲ್ಲಿ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆದ್ದರಿಂದ ಬಿಜೆಪಿ ಪಕ್ಷವನ್ನು ಹೊಗಳಿರುವ ಧುರಂಧರ್ 2 (Dhurandhar 2) ಸಿನಿಮಾವನ್ನು ಚುನಾವಣೆ ಮುಗಿಯುವವರೆಗೆ ರಾಜ್ಯದಲ್ಲಿ ನಿಷೇಧ ಮಾಡಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾ ಮಾಡಿದೆ.
ಈ ಧುರಂಧರ್ 2 ಸಿನಿಮಾದಲ್ಲಿ ಭಾರತೀಯ ಜನತಾ ಪಕ್ಷವನ್ನು ಹಿರೋ ತರ ಬಿಂಬಿಸಿರುವ ಕಾರಣ ಚುನಾವಣೆ ಸಂದರ್ಭದಲ್ಲಿ ಜನರು ಈ ಸಿನಿಮಾದಿಂದ ಪ್ರೇರೆಪಿತರಾಗಿ ಬೇರೆ ರಾಜಕೀಯ ಪಕ್ಷಗಳಿಗೆ ನಷ್ಟವಾಗುವ ಸಂಭವವಿದೆ, ಹೀಗಾಗಿ ಚುನಾವಣೆ ಮುಗಿಯುವ ತನಕ ಈ ಸಿನಿಮಾವನ್ನು ತಾತ್ಕಾಲಿಕವಾಗಿ ನಿಷೇಧ ಮಾಡಬೇಕೆಂದು ಅರ್ಜಿ ಸಲ್ಲಿಸಲಾಗಿತ್ತು.
ಆದರೆ ಈ ಸಿನಿಮಾ ಈಗಾಗಲೇ ತೆರೆಕಂಡಿದೆ ಮತ್ತು ಸೆನ್ಸಾರ್ಶಿಫ್ನ್ನು ಈ ಸಿನಿಮಾ ಪಡೆದಿದೆ ಹಾಗಾಗಿ ಈ ಸಿನಿಮಾವನ್ನು ಬ್ಯಾನ್ ಮಾಡಲು ಸಾಧ್ಯವಿಲ್ಲ, ಮತ್ತು ಈ ರೀತಿ ಸಿನಿಮಾವನ್ನು ಬ್ಯಾನ್ ಮಾಡಿದರೆ ಇದು ಕೆಟ್ಟ ಸಂಸ್ಕೃತಿಗೆ ನಾಂದಿ ಹಾಡುತ್ತೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ತಮಿಳುನಾಡು ಚುನಾವಣೆ
ತಮಿಳುನಾಡಿನಲ್ಲಿ 234 ಕ್ಷೇತ್ರಗಳಿಗೆ ಏಪ್ರಿಲ್ 23 ರಂದು ಚುನಾವಣೆ ನಡೆಯಲಿದ್ದು, ಮೇ 4 ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಈ ಭಾರಿಯ ಚುನಾವಣೆಯಲ್ಲಿ ಆಡಳಿಯರೂಢ ಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷ ಒಟ್ಟಿಗೆ ಸ್ಪರ್ಧಿಸುತ್ತಿದ್ದರೆ, ಬಿಜೆಪಿ ಮತ್ತು ಎಐಎಡಿಎಂಕೆ ಸಹ ಮೈತ್ರಿ ಪಕ್ಷಗಳಾಗಿ ಕಣಕ್ಕೀಳಿಯುತ್ತಿವೆ. ಸಿನಿಮಾ ನಟ ಧಳಪತಿ ವಿಜಯ್ ಒಬ್ಬಂಟಿಯಾಗಿ ಈ ಭಾರಿಯ ಚುನಾವಣೆಯಲ್ಲಿ ತಮ್ಮ ತಮಿಳಿಗ ವೆಟ್ರಿಗ ಕಳಗಂ ಪಕ್ಷದ ಮೂಲಕ ರಣರಂಗವನ್ನು ಪ್ರವೇಶಿಸುತ್ತಿದ್ದಾರೆ.
ಧುರಂಧರ್ 2 ಬಗ್ಗೆ
ಧುರಂಧರ್ 2 ಇದು ಧುರಂಧರ್ ಸಿನಿಮಾದ ಎರಡನೇ ಭಾಗವಾಗಿದೆ. ಈ ಸಿನಿಮಾವು ಕರಾಚಿಯ ಲಿಯಾರಿಗೆ ತೆರಳಿರುವ ಭಾರತದ ಗುಪ್ತಚರನ ಕುರಿತು ನಿರ್ಮಿಸಲಾಗಿರುವ ಒಂದು ಕಾಲ್ಪನಿಕ ಕಥೆಯಾಗಿದೆ. ಅದರೆ ಈ ಸಿನಿಮಾದಲ್ಲಿ ಹಲವು ನೈಜ ಘಟನೆಗಳ ಸನ್ನಿವೇಶಗಳನ್ನು ಸೇರಿಸಿಕೊಂಡಿರುವ ಕಾರಣ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸಿನಿಮಾದಲ್ಲಿ ರಣವೀರ್ ಸಿಂಗ್, ರಾಕೇಶ್ ಬೇಡಿ, ಆರ್.ಮಾಧವನ್, ಅರ್ಜುನ್ ರಾಂಪಾಲ್, ಡ್ಯಾನಿಶ್ ಇಕ್ಬಾಲ್, ಸಾರಾ ಅರ್ಜುನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಸಿನಿಮಾದ ನಿರ್ದೇಶಕ ಆದಿತ್ಯ ಧರ್ ಈ ಸಿನಿಮಾದ ನಿರ್ದೇಶಕರಾಗಿದ್ದಾರೆ.

