ಕಾಸರಗೋಡು: ಹದಿನೇಳರ ಹರೆಯದ ಬಾಲಕನೊಬ್ಬನಿಗೆ 36ರ ಹರೆಯದ ಮಹಿಳೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹೊಸದುರ್ಗ ಠಾಣೆ ಪೊಲೀಸರು 'ಪೋಕ್ಸೋ'ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ.
ರಾಜಾಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕ ನೀಡಿದ ದೂರಿನ ಮೇರೆಗೆ ಈ ಕೇಸು ದಾಖಲಾಗಿದೆ. ಪ್ರಕರಣ ರಾಜಾಪುರಂ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಹಿನ್ನೆಲೆಯಲ್ಲಿ ಕೇಸನ್ನು ಅತ್ತ ವರ್ಗಾಯಿಸಲಾಗಿದೆ. ಹೊಸದುರ್ಗ ಠಾಣೆ ಪೊಲೀಸರು ದಾಖಲಿಸಿಕೊಂಡಿರುವ ಇನ್ನೊಂದು ಪೋಕ್ಸೋ ಪ್ರಕರಣದಲ್ಲಿ ಇದೇ ಬಾಲಕ ಆರೋಪಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಾಲಕನನ್ನು ವಶಕ್ಕೆ ತೆಗೆದು ವಿಚಾರಣೆ ನಡೆಸುವ ಮಧ್ಯೆ 36ರ ಹರೆಯದ ಮಹಿಳೆ ತನಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬಾಲಕ ಮಾಹಿತಿ ನಿಡಿದ್ದಾನೆ. ಈ ನಿಟ್ಟಿನಲ್ಲಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು, ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಸಮಗ್ರ ವಿಚಾರಣೆ ನಡೆಸಲಾಗುವುದು ಎಂದು ರಾಜಾಪುರಂ ಠಾಣೆ ಪೊಲೀಸರು ತಿಳಿಸಿದ್ದಾರೆ.
POCSO

