ಲೇಹ್: ಗುರುವಾರ ಲಡಾಖ್ನ ಲೇಹ್ನಲ್ಲಿ 4.1 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.
ಲೇಹ್ನಲ್ಲಿ ಭೂಕಂಪನದ ಕೇಂದ್ರಬಿಂದುವಿದ್ದು, ಬೆಳಗಿನ ಜಾವ 3.54ಕ್ಕೆ ಕಂಪನ ಸಂಭವಿಸಿದೆ ಎಂದು ವರದಿಯಾಗಿದೆ.
ಭೂಕಂಪನದ ವೇಳೆ ಆತಂಕಗೊಂಡ ಜನರು ಮನೆಯಿಂದ ಹೊರ ಬಂದಿದ್ದಾರೆ.
ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಆಸ್ತಿಪಾಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ.

