HEALTH TIPS

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ| 4,660 ಹೆಚ್ಚುವರಿ ಮತಗಟ್ಟೆಗಳ ಸ್ಥಾಪನೆ

 ಕೋಲ್ಕತಾ: ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದಲ್ಲಿ ಹೆಚ್ಚುವರಿಯಾಗಿ 4,660 ಮತಗಟ್ಟೆಗಳ ಸ್ಥಾಪಿಸಲು ಮತ್ತು 321 ಮತಗಟ್ಟೆಗಳನ್ನು ಸ್ಥಳಾಂತರಿಸಲು ಚುನಾವಣಾ ಆಯೋಗ ಅನುಮೋದನೆ ನೀಡಿದೆ. ಈ ಮೂಲಕ, ರಾಜ್ಯದ ಚುನಾವಣಾ ಮೂಲಸೌಕರ್ಯವನ್ನು ಗಣನೀಯವಾಗಿ ವಿಸ್ತರಿಸಲಾಗಿದೆ.


ಇದರೊಂದಿಗೆ, ರಾಜ್ಯದ ಒಟ್ಟು ಮತಗಟ್ಟೆಗಳ ಸಂಖ್ಯೆ 85,379ಕ್ಕೆ ಏರಿದೆ. ಹೆಚ್ಚು ಮತದಾರರನ್ನು ಹೊಂದಿರುವ ಮತಗಟ್ಟೆಗಳ ದಟ್ಟಣೆಯನ್ನು ನಿಭಾಯಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಆಯೋಗ ಹೇಳಿದೆ. ಮತದಾನವು ಎಪ್ರಿಲ್ 23 ಮತ್ತು 29ರಂದು ನಡೆಯಲಿದೆ. ಮತ ಎಣಿಕೆಯು ಮೇ 4ರಂದು ನಡೆಯುವುದು.

''ನೋಂದಾಯಿತ ಮತದಾರರ ಸಂಖ್ಯೆ 1,200ನ್ನು ಮೀರುವ ಸ್ಥಳಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನ ಪ್ರಕ್ರಿಯೆಯನ್ನು ಸರಳೀಕರಿಸಲು ಮತ್ತು ಮತದಾನದ ದಿನ ಉದ್ದನೆಯ ಸಾಲುಗಳನ್ನು ಕಡಿತಗೊಳಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ'' ಎಂದು ಭಾರತೀಯ ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries