HEALTH TIPS

ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇಕಡಾ 50ರಷ್ಟು ಹೆಚ್ಚಳ, 272 ಸ್ಥಾನ ಮಹಿಳೆಯರಿಗೆ ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

ನವದೆಹಲಿ: ಲೋಕಸಭೆಯಲ್ಲಿ ಎಲ್ಲಾ ರಾಜ್ಯಗಳ ಸ್ಥಾನಗಳನ್ನು ಶೇಕಡಾ 50ರಷ್ಟು ಹೆಚ್ಚಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಕುರಿತ ಚರ್ಚೆಯ ವೇಳೆ ಮಾತನಾಡಿದ ಸಚಿವ ಅರ್ಜುನ್ ರಾಮ್ ಮೇಘವಾಲ್, ಒಟ್ಟು ಲೋಕಸಭಾ ಸ್ಥಾನಗಳನ್ನು 815ಕ್ಕೆ ಹೆಚ್ಚಿಸಲಾಗುವುದು, ಅದರಲ್ಲಿ 272 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಹೇಳಿದರು.

ಲೋಕಸಭೆಯ ವಿಶೇಷ ಅಧಿವೇಶನದ ಮೊದಲನೇ ದಿನವಾದ ಗುರುವಾರ ಕೇಂದ್ರ ಸರ್ಕಾರ ಮೂರು ಮಸೂದೆಗಳನ್ನು ಮಂಡಿಸಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸಂವಿಧಾನ (131ನೇ ತಿದ್ದುಪಡಿ) ಮಸೂದೆ-2026 ಅನ್ನು ಮಂಡಿಸಿದರು. ಇದಲ್ಲದೆ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತು ಮಸೂದೆಯನ್ನು ಮಂಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆ-2026 ಅನ್ನು ಮಂಡಿಸಿದರು. ಈ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries