HEALTH TIPS

ಅಮಿತ್‌ ಶಾ ಭೇಟಿಗೂ ಮುನ್ನ ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳ ಘೋಷಣೆ

ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಲಡಾಖ್ ಪ್ರವಾಸಕ್ಕೂ ಮುನ್ನ, ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಆಡಳಿತಾತ್ಮಕ ಸುಧಾರಣೆಯ ಭಾಗವಾಗಿ ಐದು ಹೊಸ ಜಿಲ್ಲೆಗಳ ರಚನೆಗಾಗಿ ಅಲ್ಲಿನ ಆಡಳಿತ ಮಂಡಳಿ ಸೋಮವಾರ ಅಧಿಕೃತ ಅನುಮೋದನೆ ನೀಡಿದೆ.

ಕಾರ್ಗಿಲ್ ಪ್ರದೇಶದಲ್ಲಿ ಜನ್ಸ್ಕರ್ ಮತ್ತು ದ್ರಾಸ್ ಹಾಗೂ ಲೇಹ್ ಪ್ರದೇಶದಲ್ಲಿ ಶ್ಯಾಮ್, ನುಬ್ರಾ ಮತ್ತು ಚಾಂಗ್‌ಥಾಂಗ್‌ ಹೊಸ ಜಿಲ್ಲೆಗಳಾಗಿ ಅಸ್ತಿತ್ವಕ್ಕೆ ಬರಲಿವೆ ಎಂದು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಹೇಳಿದ್ದಾರೆ.

ಈ ನಿರ್ಧಾರದಿಂದಾಗಿ ಲಡಾಖ್‌ನಲ್ಲಿನ ಒಟ್ಟು ಜಿಲ್ಲೆಗಳ ಸಂಖ್ಯೆ 2 ರಿಂದ 7ಕ್ಕೆ ಏರಿಕೆಯಾದಂತಾಗಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಕ್ಸೇನಾ, ಈ ನಿರ್ಧಾರವನ್ನು ಐತಿಹಾಸಿಕ ಎಂದು ಬಣ್ಣಿಸಿದ್ದಾರೆ. ದೂರದ ಪ್ರದೇಶಗಳ ಜನರಿಗೆ ಆಡಳಿತದ ಎಲ್ಲಾ ಸೌಲಭ್ಯಗಳು ತ್ವರಿತವಾಗಿ ಒದಗಿಸುವ ನಿಟ್ಟಿನಲ್ಲಿ ಹಾಗೂ ದಶಕಗಳ ಕಾಲದ ಬೇಡಿಕೆಯನ್ನು ಈಡೇರಿಸುವ ಉದ್ದೇಶದಿಂದ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

ಏಪ್ರಿಲ್ 30ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎರಡು ದಿನಗಳ ಕಾಲ ಲಡಾಖ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳ ಪರಿಶೀಲನೆ ನಡೆಸಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries