HEALTH TIPS

ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆ: 736 ಸ್ಥಾನಗಳಲ್ಲಿ ಬಿಜೆಪಿ ಅವಿರೋಧ ಆಯ್ಕೆ

 ಗಾಂಧಿನಗರ: ಗುಜರಾತ್ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ಬಳಿಕ, ರಾಜ್ಯದಾದ್ಯಂತ 15 ನಗರಪಾಲಿಕೆಗಳು, 84 ನಗರಸಭೆಗಳು, 34 ಜಿಲ್ಲಾ ಪಂಚಾಯಿತಿಗಳು ಹಾಗೂ 260 ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯಿತು.


ವಿರೋಧ ಪಕ್ಷಗಳ ಅಭ್ಯರ್ಥಿಗಳ ಮೇಲೆ ಒತ್ತಡ ಹೇರುವ ಮೂಲಕ ಅವರು ನಾಮಪತ್ರಗಳನ್ನು ಹಿಂಪಡೆಯುವಂತೆ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಈ ಚುನಾವಣೆಯ ಸಂದರ್ಭದಲ್ಲಿ ಕೇಳಿ ಬಂದಿದ್ದು, ಇದರ ಬೆನ್ನಿಗೇ, ಬಿಜೆಪಿಯ 736 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

2021ರಲ್ಲಿ ಈ ಸಂಖ್ಯೆ 220 ಹಾಗೂ 2015ರಲ್ಲಿ ಕೇವಲ 37 ಆಗಿತ್ತು.

ಗುಜರಾತ್ ರಾಜ್ಯದಲ್ಲಿ ಬಿಜೆಪಿ ಆಡಳಿತಾರೂಢ ಪಕ್ಷವಾಗಿದ್ದು, 1995ರಿಂದಲೂ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿದಿದೆ.

ಎಪ್ರಿಲ್ 15ರಂದು ನಾಮಪತ್ರ ಸಲ್ಲಿಸಿದ ಕೆಲವೇ ಕ್ಷಣಗಳಲ್ಲಿ ವಡೋದರ, ಸೂರತ್, ಮೆಹ್ಸಾನ ಹಾಗೂ ಬನಸ್ಕಾಂತದಾದ್ಯಂತ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಸುಮಾರು 400ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.

ರವಿವಾರ ಮುಂಜಾನೆ 7 ಗಂಟೆಯಿಂದ ಪ್ರಾರಂಭಗೊಂಡ ಮತದಾನ ಪ್ರಕ್ರಿಯೆ, ಸಂಜೆ 6 ಗಂಟೆಗೆ ಮುಕ್ತಾಯಗೊಂಡಿತು. ಗುಜರಾತ್ ನಾದ್ಯಂತ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 25,537 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 4.18 ಕೋಟಿ ಅರ್ಹ ಮತದಾರರು ತಮ್ಮ ಮತ ಚಲಾಯಿಸಿದರು.

ಈ ಬಾರಿ ನದಿಯಾಡ್, ಸುರೇಂದ್ರನಗರ್, ಆನಂದ್, ನವ್ ಸಾರಿ, ವಾಪಿ, ಮೊರ್ಬಿ, ಗಾಂಧಿಧಾಮ್, ಪೋರಬಂದರ್ ಹಾಗೂ ಮೆಹ್ಸಾನ ಸೇರಿದಂತೆ ಒಟ್ಟು ಒಂಬತ್ತು ನೂತನ ನಗರ ಪಾಲಿಕೆಗಳನ್ನು ರಚಿಸಲಾಗಿದ್ದು, ಇದೇ ಪ್ರಥಮ ಬಾರಿಗೆ ಈ ನಗರ ಪಾಲಿಕೆಗಳಿಗೆ ಚುನಾವಣೆ ನಡೆಯಿತು. ಎಪ್ರಿಲ್ 28ರಂದು ಮತ ಎಣಿಕೆ ನಡೆಯಲಿದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries