HEALTH TIPS

ನಾನೂ ಸೇರಿ ಎಎಪಿಯ 7 ಸಂಸದರು ಬಿಜೆಪಿ ಸೇರಿದ್ದೇವೆ: ರಾಘವ್ ಛಡ್ಡಾ ಘೋಷಣೆ

 ವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರಾದ ರಾಘವ್ ಛಡ್ಡಾ, ಸಂದೀಪ್ ಪಾಠಕ್ ಸೇರಿದಂತೆ ಪಕ್ಷದ ಏಳು ಸದಸ್ಯರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಶುಕ್ರವಾರ ಘೋಷಿಸಿದ್ದಾರೆ. 


ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಛಡ್ಡಾ, ಎಎಪಿಯ 10 ಮಂದಿ ರಾಜ್ಯಸಭಾ ಸದಸ್ಯರಲ್ಲಿ ಏಳು ಮಂದಿ ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ರಾಜ್ಯಸಭೆಯ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಪತ್ರವನ್ನು ಸಲ್ಲಿಸಿದ್ದೇವೆ. ಪಕ್ಷದ ಮೂರನೇ ಎರಡರಷ್ಟು ಸದಸ್ಯರು ಬಿಜೆಪಿಯೊಂದಿಗೆ ವಿಲೀನಗೊಳ್ಳುತ್ತಿದ್ದಾರೆ. ಅಗತ್ಯವಿರುವ ಎಲ್ಲ ದಾಖಲೆಗಳನ್ನು ಸಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಹರಭಜನ್ ಸಿಂಗ್, ರಾಜೇಂದ್ರ ಗುಪ್ತಾ, ವಿಕ್ರಮ್ ಸಾಹ್ನಿ, ಸ್ವಾತಿ ಮಾಲಿವಾಲ್ ಹಾಗೂ ಅಶೋಕ್ ಮಿತ್ತಲ್ ಸಹ ಬಿಜೆಪಿಗೆ ಸೇರುತ್ತಿದ್ದಾರೆ ಎಂದು ಛಡ್ಡಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯ ವೇಳೆ ಛಡ್ಡಾ ಅವರೊಂದಿಗೆ ಸಂದೀಪ್ ಪಾಠಕ್ ಹಾಗೂ ಅಶೋಕ್ ಮಿತ್ತಲ್ ಉಪಸ್ಥಿತರಿದ್ದರು.

ಇತ್ತಿಚೆಗಷ್ಟೇ ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ರಾಘವ್‌ ಛಡ್ಡಾ ಅವರನ್ನು ಎಎಪಿ ಕೆಳಗಿಳಿಸಿತ್ತು. ಇದರ ಬೆನ್ನಲ್ಲೇ ಎಎಪಿ ವಿರುದ್ಧ ಛಡ್ಡಾ ವಾಗ್ದಾಳಿ ನಡೆಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries