ನವದೆಹಲಿ: ಆಮ್ ಆದ್ಮಿ ಪಕ್ಷ ರಾಜ್ಯಸಭೆಯಲ್ಲಿ ಉಪ ನಾಯಕನ ಸ್ಥಾನದಿಂದ ಸಂಸದ ರಾಘವ್ ಚಡ್ಡಾ ಅವರನ್ನು ವಜಾಗೊಳಿಸಿದ ಬೆನ್ನಲ್ಲೆ ಪಂಜಾಬ್ ಸರಕಾರ ರಾಘವ್ ಚಡ್ಡಾ ಅವರಿಗೆ ನೀಡಿದ್ದ Z+ ವರ್ಗದ ಭದ್ರತೆಯನ್ನು ಹಿಂತೆಗೆದುಕೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ NDTV ವರದಿ ಮಾಡಿದೆ.
ರಾಘವ್ ಚಡ್ಡಾ ಅವರ ಭದ್ರತೆಗಾಗಿ ನಿಯೋಜಿತ ಪಂಜಾಬ್ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಕ್ಷಣವೇ ಪೊಲೀಸ್ ಪ್ರಧಾನ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಪ್ ಪಕ್ಷ ಮತ್ತು ರಾಘವ್ ಚಡ್ಡಾ ನಡುವಿನ ಭಿನ್ನಾಭಿಪ್ರಾಯ ಉಲ್ಭಣಗೊಳ್ಳುತ್ತಿದ್ದಂತೆ ಈ ಬೆಳವಣಿಗೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರದ ವಿರುದ್ಧ ಸಂಸತ್ತಿನಲ್ಲಿ ಧ್ವನಿ ಎತ್ತಲು ಹಿಂಜರಿಯುತ್ತಿದ್ದಾರೆ ಮತ್ತು ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಆಪ್ ಪಕ್ಷವು ಎಪ್ರಿಲ್ 2 ರಂದು ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ವಜಾಗೊಳಿಸಿತ್ತು.

