HEALTH TIPS

ತಮಿಳುನಾಡು ಚುನಾವಣೆ: BJP ಅಭ್ಯರ್ಥಿಗಳ ಪಟ್ಟಿ ಪ್ರಕಟ, ಅಣ್ಣಾಮಲೈಗೆ ಇಲ್ಲ ಅವಕಾಶ

 ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಿಂದ ಕಣಕ್ಕಿಳಿಯುವ ಎಲ್ಲ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ.


ಅವನಶಿಯಿಂದ ಕೇಂದ್ರ ಸಚಿವ ಎಲ್.ಮುರುಗನ್ ಮತ್ತು ಮೈಲಾಪುರದಿಂದ ತೆಲಂಗಾಣ ಮಾಜಿ ರಾಜ್ಯಪಾಲೆ ತಮಿಳ್‌ಇಸೈ ಸೌಂದರರಾಜನ್ ಅವರನ್ನು ಕಣಕ್ಕಿಳಿಸಿದೆ.

ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸನ್ ಕೊಯಮತ್ತೂರು (ಉತ್ತರ) ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ.

ಮೊಡಕುರಿಚಿಯಿಂದ ಕೀರ್ತಿಕಾ ಶಿವಕುಮಾರ್‌, ವಿಲವಂಕೋಡ್‌ನಿಂದ ಎಸ್‌. ವಿಜಯಧರಣಿ ಮತ್ತು ತಳ್ಳಿ ಕ್ಷೇತ್ರದಿಂದ ನಾಗೇಶ್‌ ಕುಮಾರ್‌ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದೆ.

ಎಐಎಡಿಎಂಕೆ ಜತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ 234 ಸ್ಥಾನಗಳ ಪೈಕಿ 27 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಅಣ್ಣಾಮಲೈ ಅವರಿಗೆ ಕಣಕ್ಕಿಳಿಯುವ ಅವಕಾಶ ಸಿಕ್ಕಿಲ್ಲ.

ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ನಡೆಸಿರುವ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆ ವೇಳೆ ತಿರುನಲ್ವೇಲಿ ಹಾಗೂ ಕೊಯಮತ್ತೂರು ದಕ್ಷಿಣ ಕ್ಷೇತ್ರಗಳು ಬಿಜೆಪಿಗೆ ಒಲಿದಿಲ್ಲ. ಹೀಗಾಗಿ, ಈ ಕ್ಷೇತ್ರಗಳಲ್ಲಿ ಇರುವ ಬಿಜೆಪಿ ಶಾಸಕರೇ ಬೇರೆ ಕ್ಷೇತ್ರಗಳಿಗೆ ವಲಸೆ ಹೋಗುವಂತಾಗಿದೆ.

ಹೀಗಾಗಿ, 2021ರ ಚುನಾವಣೆಯಲ್ಲಿ ತಿರುನಲ್ವೇಲಿಯಲ್ಲಿ ಗೆದ್ದಿದ್ದ ಬಿಜೆಪಿ ಘಟಕದ ಅಧ್ಯಕ್ಷ ನೈನಾರ್‌ ನಾಗೇಂದ್ರನ್‌ ಹಾಗೂ ಕೊಯಮತ್ತೂರು ‌ದಕ್ಷಿಣ ಕ್ಷೇತ್ರದಲ್ಲಿ ನಟ, ರಾಜಕಾರಣ ಕಮಲ್ ಹಾಸನ್‌ ಅವರನ್ನು ಮಣಿಸಿದ್ದ ಮಹಿಳಾ ಮೋರ್ಚಾ ಅಧ್ಯಕ್ಷೆ ವನತಿ ಶ್ರೀನಿವಾಸನ್‌ ಬೇರೆ ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ.

ಏಪ್ರಿಲ್ 23ರಂದು ತಮಿಳುನಾಡು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬೀಳಲಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries