HEALTH TIPS

ಕೇರಳ: ಮಾದಕದ್ರವ್ಯ ವಿರೋಧಿ ಕಾಯ್ದೆಯಡಿ ಕೇರಳದಲ್ಲಿ ಗರಿಷ್ಠ ಪ್ರಕರಣ ದಾಖಲು: ಕೇಂದ್ರ

ನವದೆಹಲಿ: 2023ರಲ್ಲಿ ಮಾದಕದ್ರವ್ಯ ಹಾಗೂ ಚಿತ್ತಭ್ರಾಮಕ ಪದಾರ್ಥಗಳ (NDPS) ಕಾಯ್ದೆಯಡಿ ಕೇರಳದಲ್ಲಿ 30,697 ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲೇ ಗರಿಷ್ಠವಾಗಿದೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ 2,232 ಪ್ರಕರಣಗಳೊಂದಿಗೆ ಜಮ್ಮು ಮತ್ತು ಕಾಶ್ಮೀರ ಮೊದಲ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದತ್ತಾಂಶದ ಪ್ರಕಾರ ದೇಶಾದ್ಯಂತ NDPS ಕಾಯ್ದೆಯಡಿ 1,20,010 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಸಹಾಯಕ ಗೃಹ ಸಚಿವ ನಿತ್ಯಾನಂದ ರಾಯ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ರಾಜ್ಯಗಳ ಪೈಕಿ ಕೇರಳದಲ್ಲಿ NDPS ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. 2023ರಲ್ಲಿ ಮಹಾರಾಷ್ಟ್ರದಲ್ಲಿ 15,610 ಹಾಗೂ ಪಂಜಾಬ್‌ ನಲ್ಲಿ 11,589 ಪ್ರಕರಣಗಳು ವರದಿಯಾಗಿವೆ.

ತಮಿಳುನಾಡು (10,126) ಮತ್ತು ಉತ್ತರ ಪ್ರದೇಶ (9,387) ಹೆಚ್ಚಿನ ಸಂಖ್ಯೆಯಲ್ಲಿ NDPS ಕಾಯ್ದೆಯಡಿ ಪ್ರಕರಣಗಳು ದಾಖಲಾಗಿರುವ ಇತರ ರಾಜ್ಯಗಳಾಗಿವೆ.

ಮಾದಕದ್ರವ್ಯ ಹಾಗೂ ಚಿತ್ತಭ್ರಾಮಕ ಪದಾರ್ಥಗಳ ಬಳಕೆಗೆ ಸಂಬಂಧಿಸಿದ ಕಾರ್ಯಾಚರಣೆಗಳನ್ನು ನಿಯಂತ್ರಿಸುವ 1985ರ NDPS ಕಾಯ್ದೆಗೆ 2014ರಲ್ಲಿ ತಿದ್ದುಪಡಿ ಮಾಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries