ಕೋಲ್ಕತ್ತ: ಕೋಲ್ಕತ್ತ ಮೇಲೆ ದಾಳಿ ನಡೆಸುವ ಕುರಿತ ಪಾಕಿಸ್ತಾನದ ಬೆದರಿಕೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ತಿರುಗೇಟು ನೀಡಿದ್ದಾರೆ.
55 ವರ್ಷಗಳ ಹಿಂದೆಯೇ ಪಾಕಿಸ್ತಾನ ಎರಡಾಗಿ ವಿಭಜನೆಗೊಂಡಾಗ ಅದರ ಪರಿಣಾಮಗಳನ್ನು ಎದುರಿಸಿತ್ತು ಎಂದು ಹೇಳಿದ್ದಾರೆ.
ಪಾಕಿಸ್ತಾನದ ರಕ್ಷಣಾ ಸಚಿವರು ಇಂತಹ ಪ್ರಚೋದನಕಾರಿ ಹೇಳಿಕೆಯನ್ನು ನೀಡಬಾರದು.
ಮತ್ತೆ ಬಂಗಾಳದ ಮೇಲೆ ಕಣ್ಣು ನೆಟ್ಟರೆ ಪಾಕಿಸ್ತಾನ ಎಷ್ಟು ಭಾಗಗಳಾಗಿ ವಿಭಜನೆಯಾಗುತ್ತದೆ ಎಂಬುದನ್ನು ದೇವರೇ ಬಲ್ಲ ಎಂದು ಎಚ್ಚರಿಸಿದ್ದಾರೆ.
ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಕೋಲ್ಕತ್ತ ಮೇಲೆ ದಾಳಿ ನಡೆಸುವುದಾಗಿ ಹೇಳಿಕೆ ನೀಡಿದ್ದರು. ಆದರೆ ಪಾಕಿಸ್ತಾನದ ಬೆದರಿಕೆಗೆ ಪ್ರಧಾನಿ ನರೇಂದ್ರ ಮೋದಿ ಯಾಕೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದರು.

