ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಂಗಳವಾರ ಉದ್ಘಾಟನೆಗೊಳ್ಳಬೇಕಿದ್ದ ರಾಜಸ್ಥಾನದ ಪೆಟ್ರೋಲಿಯಂ ಉತ್ಪನ್ನಗಳ ಸಂಸ್ಕರಣಾ ಘಟಕವೊಂದರಲ್ಲಿ ಸೋಮವಾರ ಬೆಂಕಿ ಅವಘಡ ಸಂಭವಿಸಿದೆ.
'ಉದ್ಘಾಟನೆಗೆ ಒಂದು ದಿನ ಮುನ್ನ ಈ ಅವಘಡ ಸಂಭವಿಸಿರುವ ಕಾರಣ ಮಂಗಳವಾರ ಆಯೋಜನೆಗೊಂಡಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ' ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ.
ಹಾನಿಯ ಬಗ್ಗೆ ಯಾವುದೇ ವರದಿಯಾಗಿಲ್ಲ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ.
ಭಾರತದ ಮೊದಲು ಹಸಿರು ಸಂಯೋಜಿತ ಸಂಸ್ಕರಣಾ ಘಟಕ ಮತ್ತು ಪೆಟ್ರೋಕೆಮಿಕಲ್ ಕಾಂಪ್ಲೆಕ್ಸ್ ಇದಾಗಿದ್ದು, ₹74,450 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗಿದೆ.
ಸಂಸ್ಕರಣಾ ಘಟಕದ ಸಿಡಿಯು ವಿಭಾಗಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಈ ಘಟನೆ ಸರ್ಕಾರದ ಸುರಕ್ಷತಾ ವೈಫಲ್ಯಕ್ಕೆ ಸಾಕ್ಷಿ ಎಂದು ವಿಪಕ್ಷಗಳು ಟೀಕಿಸಿವೆ.

