ಅಬುಧಾಬಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಅಬುಧಾಬಿಯಲ್ಲಿ ಯುಎಇ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಪಶ್ಚಿಮ ಏಷ್ಯಾ ಸಂಘರ್ಷ ಹಾಗೂ ಅದರ ಪರಿಣಾಮಗಳ ಕುರಿತು ಚರ್ಚಿಸಿದ್ದಾರೆ.
ಜೈಶಂಕರ್ ಅವರು ಏಪ್ರಿಲ್ 9 ರಿಂದ 12 ರವರೆಗೆ ಮಾರಿಷಸ್ ಮತ್ತು ಯುಎಇ ದೇಶಗಳಿಗೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದಾರೆ.
ಅಬುಧಾಬಿಯಲ್ಲಿ ಯುಎಇ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಅಬ್ದುಲ್ಲಾ ಬಿನ್ ಜಾಯೆದ್ ಅವರನ್ನು ಭೇಟಿ ಮಾಡಿದ್ದು ನಿಜಕ್ಕೂ ಸಂತೋಷ ತಂದಿದೆ. ನಮ್ಮ ಭೇಟಿಯು ಪಶ್ಚಿಮ ಏಷ್ಯಾ ಸಂಘರ್ಷ ಹಾಗೂ ಅದರ ಪರಿಣಾಮಗಳ ಮೇಲೆ ಕೇಂದ್ರೀಕೃತವಾಗಿತ್ತು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

