HEALTH TIPS

ಮಳೆಗಾಲ ಪೂರ್ವ ಸ್ವಚ್ಛತಾ ಪರಿಶೀಲನಾ ಸಭೆ: ಕಚೇರಿ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸಲು ನಿರ್ಧಾರ

ಕಾಸರಗೋಡು: ಮಳೆಗಾಲ ಪೂರ್ವ ಸ್ವಚ್ಛತಾ ಕಾರ್ಯ ಚುರುಕುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ವಿಶೇಷ ಸಭೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿತು.  

ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅಧ್ಯಕ್ಷತೆ ವಹಿಸಿದ್ದರು.   ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡದೆ ತ್ಯಾಜ್ಯ ಸುರಿಯುವ ಸಂಸ್ಥೆಗಳು ಮತ್ತು ವ್ಯಕ್ತಿಗಳ ಮೇಲೆ ದಂಡ ವಿಧಿಸಲು ಮತ್ತು ಸ್ಪೆಷ್ಯಲ್ ಸ್ಕ್ವೇಡ್‍ಗಳ ಚಟುವಟಿಕೆ ತೀವ್ರಗೊಳಿಸಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿರುವ ಚೆರ್ಕಳ ದಕ್ಷಿಣ ಮತ್ತು ಚೆರುವತ್ತೂರು ವೀರಮಲಕುನ್ನು ಪ್ರದೇಶದಲ್ಲಿ ಭೂಕುಸಿತ ತಡೆಗಟ್ಟಲು ಮತ್ತು ಮಳೆನೀರು ಸರಾಗವಾಗಿ ಹರಿದು ಹೋಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡಿರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ನಿರ್ಮಾಣ ಗುತ್ತಿಗೆದಾರ ಕಂಪನಿಯ ಪ್ರತಿನಿಧಿಗಳು ಸಭೆಗೆ ಮಾಹಿತಿ ನೀಡಿದರು. ರಾಷ್ಟ್ರೀಯ ಹೆದ್ದಾರಿ 66 ಹಾದುಹೋಗುವ ಪಂಚಾಯಿತಿಗಳು ಮತ್ತು ನಗರಸಭೆಗಳು ನೀರಿನ ಬವಣೆ ದೂರಮಾಡುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಸೂಚಿಸಿದರು. 

ಜಿಲ್ಲೆಯ ಎಲ್ಲಾ ಕಚೇರಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಮಳೆಗಾಲಕ್ಕೂ ಮೊದಲು ಸ್ವಚ್ಛಗೊಳಿಸಬೇಕು.  ಸ್ವಚ್ಛತಾ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು ಮತ್ತು ಕಸ ಎಸೆಯುವವರ ವಿರುದ್ಧ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. 

ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ(ಎಡಿಎಂ)ಕೆ.ವಿ. ಶ್ರುತಿ, ಸ್ಥಳೀಯಾಡಳಿತ ಇಲಾಖೆ ಜಂಟಿ ನಿರ್ದೇಶಕ ಜೇಸನ್ ಮ್ಯಾಥ್ಯೂ ಹಾಗೂ ವಿವಿಧ ಇಲಾಖಾ ಮುಖ್ಯಸ್ಥರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries