HEALTH TIPS

ತೀವ್ರ ಬಿಸಿಲು: ಜನರಿಗೆ 'ಸ್ವಯಂ ಲಾಕ್ ಡೌನ್' ಕರೆ ನೀಡಿದ ಸಿಎಂ ಪಿಣರಾಯ್ ವಿಜಯನ್

ತಿರುವನಂತಪುರಂ: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆ ಜನರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಕರೆ ನೀಡಿದ್ದಾರೆ. ತೀವ್ರ ಬಿಸಿಲಿನ ಅನಾಹುತಗಳನ್ನು ತಪ್ಪಿಸಲು ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಿ, ಸ್ವಯಂ 'ಲಾಕ್‌ಡೌನ್' ಪಾಲಿಸಬೇಕೆಂದು ಅವರು ಸಲಹೆ ನೀಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದ ಪಾಲಕ್ಕಾಡ್, ಕೊಲ್ಲಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಶಾಖದಲೆಯ ಎಚ್ಚರಿಕೆ ನೀಡಿದೆ. ಈ ಜಿಲ್ಲೆಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿದ್ದು, ಒಣಹವೆಯ ಪರಿಣಾಮದಿಂದ ಬಿಸಿಯ ತೀವ್ರತೆ ಇನ್ನಷ್ಟು ಹೆಚ್ಚಾಗಿದೆ. ಉಳಿದ ಜಿಲ್ಲೆಗಳಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.

ಏಪ್ರಿಲ್ 23 ಮತ್ತು 24ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಶಾಖದಲೆಯ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಜೊತೆಗೆ, ಏಪ್ರಿಲ್ 27ರವರೆಗೆ ತಮಿಳುನಾಡು, ಆಂಧ್ರಪ್ರದೇಶದ ಕರಾವಳಿ ಮತ್ತು ಕರ್ನಾಟಕ ಕರಾವಳಿ ಭಾಗಗಳಲ್ಲಿ ಬಿಸಿ ಹಾಗೂ ಆರ್ದ್ರ ಹವಾಮಾನ ಮುಂದುವರಿಯಲಿದೆ ಎಂದು ತಿಳಿಸಿದೆ.

ಈ ಹಿನ್ನೆಲೆ ಸಾರ್ವಜನಿಕರು ಬಿಸಿಲಿಗೆ ನೇರವಾಗಿ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು. ದೇಹದಲ್ಲಿ ನೀರಿನಾಂಶ ಕಾಪಾಡಿಕೊಳ್ಳಲು ಹೆಚ್ಚು ನೀರು ಕುಡಿಯುವುದು, ಒಆರ್‌ಎಸ್, ಮಜ್ಜಿಗೆ, ಲಸ್ಸಿ ಮುಂತಾದ ಪಾನೀಯಗಳನ್ನು ಸೇವಿಸುವಂತೆ ಇಲಾಖೆ ಸಲಹೆ ನೀಡಿದೆ.

ಇದಲ್ಲದೆ, ಏಪ್ರಿಲ್ 23ರಿಂದ 27ರವರೆಗೆ ಕೇರಳ ಮತ್ತು ಕರ್ನಾಟಕದಲ್ಲಿ ಗಂಟೆಗೆ 30-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನವನ್ನು ಏಪ್ರಿಲ್ 25ರವರೆಗೆ ಆಂಧ್ರಪ್ರದೇಶ ಕರಾವಳಿ ಮತ್ತು ಯಾನಂ ಪ್ರದೇಶದಲ್ಲಿಯೂ ನಿರೀಕ್ಷಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries