ನವದೆಹಲಿ: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು 2025-26ನೇ ಹಣಕಾಸು ವರ್ಷದಲ್ಲಿ ಅತ್ಯಧಿಕ ಮೊತ್ತದ ಅನುದಾನ ನೀಡಿದೆ . ಶನಿವಾರ ಈ ಕುರಿತು ಮಾಹಿತಿ ನೀಡಿರುವ ಸಚಿವಾಲಯವು, ಈ ವರ್ಷ ಒಟ್ಟು ₹11,810.82 ಕೋಟಿ ಹಣವನ್ನು ವಿವಿಧ ಕಲ್ಯಾಣ ಯೋಜನೆಗಳಿಗಾಗಿ ಬಳಸಿಕೊಂಡಿರುವುದಾಗಿ ತಿಳಿಸಿದೆ.
ಅಧಿಕೃತ ಹೇಳಿಕೆಯ ಪ್ರಕಾರ, ಈ ವೆಚ್ಚವನ್ನು ಸಚಿವಾಲಯದ ಅಡಿಯಲಿರುವ 'ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ'ಯು ಮಾಡಿದ್ದು, ಕಲ್ಯಾಣ ಯೋಜನೆಗಳಿಗಾಗಿ ಹಣವನ್ನು ಸಕಾಲದಲ್ಲಿ ಬಳಸಿಕೊಳಸಿಕೊಳ್ಳಲಾಗಿದೆ ಎಂದು ಹೇಳಿದೆ.
2025-26ರಲ್ಲಿ ಪರಿಶಿಷ್ಟ ಜಾತಿ ಮತ್ತು ಇತರ ಹಿಂದುಳಿದ ವರ್ಗಗಳ (ಔಃಅ) ಕಲ್ಯಾಣ ಯೋಜನೆಗಳಿಗಾಗಿ ಇಲಾಖೆಯು ಈವರೆಗಿನ ಗರಿಷ್ಠ ಅನುದಾನವನ್ನು ಬಳಸಿಕೊಳ್ಳಲಾಗಿದೆ.
ಮಾದಕ ವ್ಯಸನ ತಡೆಗಟ್ಟುವಿಕೆ, ಪೌರಕಾರ್ಮಿಕರ ಕ್ಷೇಮಾಭಿವೃದ್ಧಿ, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು ಹಾಗೂ ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳ ಪುನರ್ವಸತಿ ಕಾರ್ಯಕ್ರಮಗಳಿಗೂ ದಾಖಲೆ ಪ್ರಮಾಣದ ಅನುದಾನ ಬಳಕೆಯಾಗಿದೆ.
ಈ ಅನುದಾನವು ಸಾಮಾಜಿಕ ನ್ಯಾಯ, ಸಬಲೀಕರಣ ಹಾಗೂ ಸಮಾಜದ ವಂಚಿತ ಮತ್ತು ದುರ್ಬಲ ವರ್ಗಗಳ ಅಭಿವೃದ್ಧಿಪಡಿಸುವಲ್ಲಿ ಸರ್ಕಾರ ಹೊಂದಿರುವ ಬದ್ಧತೆಯನ್ನು ತೋರಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

