ನವದೆಹಲಿ: ರಕ್ತಚಂದನ ರಫ್ತು ಪ್ರಮಾಣ ಮಿತಿಯನ್ನು ಹೆಚ್ಚಳ ಮಾಡಬೇಕು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪೀಯೂಷ್ ಗೋಯಲ್ ಅವರಿಗೆ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಮನವಿ ಮಾಡಿದರು.
ಸಂಸತ್ ಭವನದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, 'ಕರ್ನಾಟಕಕ್ಕೆ 10 ಟನ್ ರಫ್ತಿಗೆ ಮಾತ್ರ ಅವಕಾಶ ನೀಡಲಾಗಿದೆ.
ಈ ಮಿತಿಯನ್ನು ಹೆಚ್ಚಳ ಮಾಡಬೇಕು. ಇದರಿಂದ ರಾಜ್ಯದ ರೈತರಿಗೆ ಅನುಕೂಲವಾಗಲಿದೆ' ಎಂದರು.

