HEALTH TIPS

ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿ ಪರ ಪ್ರಚಾರ ಮಾಡಲಿರುವ ಕೇಜ್ರಿವಾಲ್

 ನವದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಏ. 26 ಮತ್ತು 27 ರಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪರ ಪ್ರಚಾರ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ಗುರುವಾರ ತಿಳಿಸಿವೆ.


ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಆಹ್ವಾನದ ಮೇರೆಗೆ ಕೇಜ್ರಿವಾಲ್ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಟಿಎಂಸಿ ಪರ ಪ್ರಚಾರ ಮಾಡಲಿದ್ದಾರೆ ಎಂದು ಎಎಪಿ ಹೇಳಿದೆ.

ಬುಧವಾರ ಮಮತಾ ಬ್ಯಾನರ್ಜಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದ ಕೇಜ್ರಿವಾಲ್, ಟಿಎಂಸಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದರು.

'ಈಗಷ್ಟೇ ಮಮತಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ನನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ. ಬಂಗಾಳದ ಜನತೆಗಾಗಿ ಅವರು ಹೋರಾಟ ಮಾಡುತ್ತಿದ್ದಾರೆ. ಇದು ಭಾರತೀಯ ಪ್ರಜಾಪ್ರಭುತ್ವದ ಪಾಲಿಗೆ ಅತ್ಯಂತ ಪ್ರಮುಖವಾದ ಹೋರಾಟಗಳಲ್ಲಿ ಒಂದಾಗಿದೆ' ಎಂದು ಕೇಜ್ರಿವಾಲ್‌ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದರು.

ಗುರುವಾರ ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದೆ. ಏ.29ರಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries