ನವದೆಹಲಿ: ಮಹಿಳಾ ಮೀಸಲಾತಿ ಮಸೂದೆ ಕುರಿತು ಇದೀಗ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿರುವುದು ಯಾಕೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
2023ರ ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಿದ ಮಹಿಳಾ ಮೀಸಲಾತಿ ಮಸೂದೆ ಇಂದು (ಏ.16) ಜಾರಿಗೆ ಬಂದಿದೆ. ತಿದ್ದುಪಡಿಗಳ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಅಧಿಸೂಚನೆ ಹೊರಡಿಸಿರುವುದು ಸರಿಯಲ್ಲ ಇದು ತುಂಬಾ ಗೊಂದಲಮಯವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
2011ರ ಜನಗಣತಿ ಆಧಾರದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮಾಡಿ 2029ರ ಲೋಕಸಭಾ ಚುನಾವಣೆಗೆ ಮಹಿಳೆಯರಿಗೆ ಶೇ 33 ಮೀಸಲಾತಿ ಕಲ್ಪಿಸುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.

