ಮಧೂರು: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಿಂದ ಏ.23ರಂದು ಸಂಜೆ 7ಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ. ದೇವಾಲಯದಿಂದ ಮೆರವಣಿಗೆ ಮೂಲಕ ಪೆರಡಾಲ ಕ್ಷೇತ್ರಕ್ಕೆ ತೆರಳಲಿದ್ದು, ಹಸಿರುವಾಣಿಗೆ ಅಗತ್ಯ ಇರುವ ಸುವಸ್ತುಗಳನ್ನು ಏ. 23ರಂದು ಬೆಳಗ್ಗೆ 9 ಗಂಟೆಗೆ ಮುಂಚಿತವಾಗಿ ಶ್ರೀ ಕ್ಷೇತ್ರಕ್ಕೆ ತಲುಪಿಸಬೇಕು. ಈ ಬಗ್ಗೆ ಮಾಹಿತಿಗಾಗಿ ಮೊಬೈಲ್ ಸಂಖ್ಯೆ(8075892963, 9995479348)ಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

