HEALTH TIPS

ಎಲ್‌ಪಿಜಿ ಸಿಲಿಂಡರ್‌: ಇ-ಕೆವೈಸಿ ಕಡ್ಡಾಯಗೊಳಿಸಿದ ಒಡಿಶಾ ಸರ್ಕಾರ

ಭುವನೇಶ್ವರ: ಒಡಿಶಾ ಸರ್ಕಾರವು ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ ಪಡೆಯಲು ಇ-ಕೆವೈಸಿಯನ್ನು ಕಡ್ಡಾಯಗೊಳಿಸಿದೆ ಎಂದು ಆಹಾರ ಸರಬರಾಜು ಮತ್ತು ಗ್ರಾಹಕ ಕಲ್ಯಾಣ ಸಚಿವ ಕೆ.ಸಿ. ಪಾತ್ರಾ ಅವರು ಭಾನುವಾರ ತಿಳಿಸಿದರು.

'ನಿಜವಾದ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್‌ ಸಿಗುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ' ಎಂದು ಪ್ರತಿಪಾದಿಸಿದರು.

'ಇ-ಕೆವೈಸಿ ಪೂರ್ಣಗೊಳಿಸಿರುವ ಬಳಕೆದಾರರಿಗೆ ಮಾತ್ರ ಸಿಲಿಂಡರ್‌ ವಿತರಿಸುವಂತೆ ಎಲ್‌ಪಿಜಿ ವಿತರಕರಿಗೆ ಸೂಚಿಸಿದ್ದೇವೆ. ಮಾರುಕಟ್ಟೆಯಲ್ಲಿ 1ಕೆ.ಜಿ. ಅಥವಾ 5 ಕೆ.ಜಿ. ಎಲ್‌ಪಿಜಿ ಸಿಲಿಂಡರ್‌ ಅಕ್ರಮ ಮಾರಾಟವನ್ನು ನಿಲ್ಲಿಸಿದ್ದೇವೆ. ಅಕ್ರಮವಾಗಿ ಸಿಲಿಂಡರ್‌ ಮಾರಾಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು' ಎಂದು ಅವರು ಹೇಳಿದರು.

'ಢೆಂಕನಾಲ್‌ ಜಿಲ್ಲೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 27 ಎಲ್‌ಪಿಜಿ ಸಿಲಿಂಡರ್‌ಗಳನ್ನು ಭಾನುವಾರ ವಶಪಡಿಸಿಕೊಳ್ಳಲಾಗಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries