HEALTH TIPS

ಶಾಸಕಾಂಗದಲ್ಲಿ ಮಹಿಳೆಯರಿಗೆ ಮೀಸಲಾತಿ ಇಂದಿನ ಅಗತ್ಯ: ಪ್ರಧಾನಿ ಮೋದಿ

 ನವದೆಹಲಿ: 'ಮಹಿಳಾ ಮೀಸಲಾತಿ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಗಳು ಕೇವಲ ಶಾಸಕಾಂಗ ಪ್ರಕ್ರಿಯೆಯಲ್ಲ. ಬದಲಾಗಿ ಕೋಟ್ಯಂತರ ಮಹಿಳೆಯರ ಆಕಾಂಕ್ಷೆಗಳ ಪ್ರತೀಕವಾಗಿದ್ದು, ಈ ಮಹತ್ವದ ನಡೆಯನ್ನು ಎಲ್ಲ ಸಂಸದರು ಒಟ್ಟಾಗಿ ಬೆಂಬಲಿಸಬೇಕು' ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.


'ಮಹಿಳೆಯರು ಪ್ರಗತಿ ಸಾಧಿಸಿದಾಗ ಮಾತ್ರ ದೇಶವು ಪ್ರಗತಿ ಸಾಧಿಸಲು ಸಾಧ್ಯ' ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.

2029ರ ಸಾರ್ವತ್ರಿಕ ಚುನಾವಣೆಯಿಂದ ಮಹಿಳೆಯರಿಗೆ ಸಂಸತ್ತಿನಲ್ಲಿ ಶೇ 33ರಷ್ಟು ಮೀಸಲಾತಿ ಜಾರಿಗೆ ತರಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದರು.

ಈ ವಿಷಯದ ಕುರಿತು ಚರ್ಚಿಸಲು ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

'ದೇಶವು ಒಂದು ಐತಿಹಾಸಿಕ ಕ್ಷಣದ ಹೊಸ್ತಿಲಲ್ಲಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನು ಗಟ್ಟಿಗೊಳಿಸಲು ಮತ್ತು ಸಮಾನತೆ ಹಾಗೂ ಎಲ್ಲರನ್ನು ಒಳಗೊಂಡ ಸಾಮೂಹಿಕ ಬದ್ಧತೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶವಾಗಿದೆ' ಎಂದಿದ್ದಾರೆ.

'ವಿಜ್ಞಾನ ಹಾಗೂ ತಂತ್ರಜ್ಞಾನದಿಂದ ಉದ್ಯಮಶೀಲತೆವರೆಗೆ, ಕ್ರೀಡೆಯಿಂದ ಸಶಸ್ತ್ರ ಪಡೆಯವರೆಗೆ ಮತ್ತು ಸಂಗೀತದಿಂದ ಕಲೆಯವರೆಗೆ ದೇಶದ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ' ಎಂದು ಹೇಳಿದ್ದಾರೆ.

'ಮಹಿಳಾ ಸಬಲೀಕರಣಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಲು ನಿರಂತರವಾದ ಪ್ರಯತ್ನ ನಡೆಯುತ್ತಿದೆ' ಎಂದು ತಿಳಿಸಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries