ಇದರೊಂದಿಗೆ ಲಾಲು ಪ್ರಸಾದ್ ಯಾದವ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಅತಿ ದೊಡ್ಡ ಹಿನ್ನಡೆಯಾಗಿದೆ.
ಆದರೆ, ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ನೇತೃತ್ವದ ಹಾಗೂ ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್‌ನ ಇಬ್ಬರು ಸದಸ್ಯರ ಪೀಠ ಪ್ರಕರಣದ ವಿಚಾರಣೆ ಸಂದರ್ಭ ಹಾಜರಾಗುವುದರಿಂದ 77 ವರ್ಷದ ಲಾಲು ಪ್ರಸಾದ್ ಯಾದವ್ ಅವರಿಗೆ ವಿನಾಯತಿ ನೀಡಿತು.
ಉದ್ಯೋಗಕ್ಕಾಗಿ ಭೂಮಿ ಪ್ರಕರಣದಲ್ಲಿ ಸಿಬಿಐ ದಾಖಲಿಸಿದ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿದ ಸಂದರ್ಭ ಸುಪ್ರೀಂ ಕೋರ್ಟ್, ಲಾಲು ಪ್ರಸಾದ್ ಯಾದವ್ ಅವರಿಗೆ ಈ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅನ್ವಯ ವಿಷಯವನ್ನು ಪ್ರಸ್ತಾವಿಸಲು ಅನುಮತಿ ನೀಡಿತು.
ಕಳೆದ ವರ್ಷ ಜುಲೈ 18ರಂದು ಇದೇ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ದಿಲ್ಲಿ ವಿಶೇಷ ನ್ಯಾಯಾಲಯದಲ್ಲಿ ಲಾಲು ಪ್ರಸಾದ್ ಯಾದವ್ ವಿರುದ್ಧ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸಲು ನಿರಾಕರಿಸಿತ್ತು.
2004ರಿಂದ 2009ರ ವರೆಗೆ ಲಾಲು ಪ್ರಸಾದ್ ಯಾದವ್ ಅವರು ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಈ ಉದ್ಯೋಗಕ್ಕಾಗಿ ಭೂಮಿ ಹಗರಣ ಬೆಳಕಿಗೆ ಬಂದಿತ್ತು.

