HEALTH TIPS

ಲೋಕಸಭಾ ಕ್ಷೇತ್ರಗಳ ಹೆಚ್ಚಳ: ಜನರ ದಿಕ್ಕು ತಪ್ಪಿಸುವ ತಂತ್ರ; ಜೈರಾಮ್‌ ರಮೇಶ್‌

ನವದೆಹಲಿ: ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ತಗ್ಗಿಸುವುದಿಲ್ಲ ಹಾಗೂ ಎಲ್ಲ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಶೇ 50ರಷ್ಟು ಹೆಚ್ಚಿಸುವ ಪ್ರಸ್ತಾವದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಭಾನುವಾರ ವಾಗ್ದಾಳಿ ನಡೆಸಿದೆ.

ಈ ಕುರಿತು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್‌ ರಮೇಶ್‌ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು ಪ್ರಧಾನಿ ಮೋದಿ ಅವರು ಎಂದಿನಂತೆ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ ಎಂದೂ ಹೇಳಿದ್ದಾರೆ.

ಎಲ್ಲ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಶೇ 50ರಷ್ಟು ಹೆಚ್ಚಿಸುವ ಪ್ರಸ್ತಾವದಿಂದ ದೊಡ್ಡ ಮತ್ತು ಅತಿ ಹೆಚ್ಚು ಜನಸಂಖ್ಯೆ ಇರುವ ರಾಜ್ಯಗಳಿಗಷ್ಟೇ ಅನುಕೂಲವಾಗಲಿದೆ. ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ತಗ್ಗಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಭರವಸೆಯು ಜನರ ದಿಕ್ಕು ತಪ್ಪಿಸುವ ತಂತ್ರ ಎಂದು ಹರಿಹಾಯ್ದಿದ್ದಾರೆ.

ಅರ್ಥಪೂರ್ಣ ಸಮಾಲೋಚನೆ ಮತ್ತು ಸಾರ್ವಜನಿಕ ಚರ್ಚೆಯನ್ನು ನಡೆಸದೆ ಬಲವಂತವಾಗಿ ಪ್ರಸ್ತಾವವನ್ನು ಸಂಸತ್ತಿನಲ್ಲಿ ತೂರಿಸಲಾಗುತ್ತಿದೆ ಎಂದು ದೂರಿದ್ದಾರೆ.

ಕೇರಳದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮೋದಿ ಅವರು, 'ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರ ಪ್ರದೇಶ, ಗೋವಾ ಅಥವಾ ತೆಲಂಗಾಣ ಯಾವುದೇ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ತಗ್ಗಿಸುವುದಿಲ್ಲ' ಎಂದು ಹೇಳಿದ್ದರು.

'ದೇಶದ ಜನರ ಕಣ್ಣಿಗೆ ಮಣ್ಣೆರೆಚುವ ತಂತ್ರವು ಪ್ರಧಾನಿ ಅವರಿಗೆ ಕರಗತವಾಗಿದೆ. ಪ್ರಸ್ತುತ ಉತ್ತರ ಪ್ರದೇಶ ಮತ್ತು ಕೇರಳದ ಲೋಕಸಭಾ ಕ್ಷೇತ್ರಗಳ ನಡುವಣ ಅಂತರ 60. ಪ್ರಧಾನಿ ಅವರ ಪ್ರಸ್ತಾವವು ಈ ಅಂತರವನ್ನು 90ಕ್ಕೆ ಹೆಚ್ಚಿಸುತ್ತದೆ. ಅದೇ ರೀತಿ ಉತ್ತರ ಪ್ರದೇಶ ಮತ್ತು ತಮಿಳುನಾಡಿನ ಕ್ಷೇತ್ರಗಳ ನಡುವಣ ಅಂತರವು 39ರಿಂದ ಕನಿಷ್ಠ 59ಕ್ಕೆ ಏರಿಕೆಯಾಗಲಿದೆ' ಎಂದು 'ಎಕ್ಸ್‌'ನಲ್ಲಿ ತಿಳಿಸಿದ್ದಾರೆ.

ಈ ಪ್ರಸ್ತಾವದಿಂದ ದಕ್ಷಿಣ ಭಾರತಕ್ಕೆ ಮಾತ್ರವಲ್ಲದೆ ಪಂಜಾಬ್‌, ಹರಿಯಾಣ ಮತ್ತಿತರ ಈಶಾನ್ಯ ಭಾರತದ ರಾಜ್ಯಗಳಿಗೂ ಅನ್ಯಾಯವಾಗಲಿದೆ ಎಂದು ವಿವರಿಸಿದ್ದಾರೆ.

ದೇಶವು ಗಂಭೀರವಾದ ಆರ್ಥಿಕ ಮತ್ತು ವಿದೇಶಿ ನೀತಿ ಬಿಕ್ಕಟ್ಟು ಎದುರಿಸುತ್ತಿದೆ. ಆದರೆ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಹೆಚ್ಚಳದ ಬಗ್ಗೆ ಪ್ರಧಾನಿ ಚಿಂತಿಸುತ್ತಿದ್ದಾರೆ. ಇದು ಜನರ ದಿಕ್ಕುತಪ್ಪಿಸುವ ತಂತ್ರವಲ್ಲದೆ ಬೇರೇನೂ ಅಲ್ಲ' ಎಂದು ಆರೋಪಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries