HEALTH TIPS

ಮಹಿಳಾ ಮೀಸಲಾತಿ ಕಾಯ್ದೆ ತಿದ್ದುಪಡಿ ಬಗ್ಗೆ ಚರ್ಚೆಗೆ ಕಾಂಗ್ರೆಸ್ ಕಾರ್ಯಕಾರಿ ಸಭೆ

ನವದೆಹಲಿ: ಮಹಿಳಾ ಮೀಸಲಾತಿ ಕಾಯ್ದೆ ತಿದ್ದುಪಡಿ, ಸಂಭವನೀಯ ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಪಶ್ಚಿಮ ಏಷ್ಯಾ ಸಂಘರ್ಷ ಸಂಬಂಧ ಚರ್ಚಿಸಲು ಕಾಂಗ್ರೆಸ್ ಶುಕ್ರವಾರ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಶಾಸಕಾಂಗದಲ್ಲಿ ಮಹಿಳೆಯರಿಗೆ ಮೀಸಲಾತಿ ಇಂದಿನ ಅಗತ್ಯ: ಪ್ರಧಾನಿ ಮೋದಿ

2029ರ ಲೋಕಸಭಾ ಚುನಾವಣೆಗೂ ಮುನ್ನವೇ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲು ವಿಶೇಷ ಅಧಿವೇಶನ ಕರೆದಿದೆ.

ಅದಕ್ಕೂ ಮುನ್ನ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿ ಸಭೆ ಸೇರಲಿದೆ.

ನವದೆಹಲಿಯಲ್ಲಿರುವ ಪಕ್ಷದ ‍ಪ್ರಧಾನ ಕಚೇರಿ 'ಇಂದಿರಾ ಭವನ'ದಲ್ಲಿ ಸಂಜೆ 3 ಗಂಟೆಗೆ ಸಭೆ ನಡೆಯಲಿದೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ನಾಯಕಿ ಸೋನಿಯಾ ಗಾಂಧಿ, ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ಈ ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries