HEALTH TIPS

ನಾಸಿಕ್ ಟಿಸಿಎಸ್ ಪ್ರಕರಣ: ಲೈಂಗಿಕ ಕಿರುಕುಳದ ವಿವರ ಬಿಚ್ಚಿಟ್ಟ ಸಂತ್ರಸ್ತೆ

ಮುಂಬೈ: ಕಚೇರಿಯಲ್ಲಿ ತಮ್ಮ ಮೇಲಾದ ದೌರ್ಜನ್ಯ ಮತ್ತು ಬಲವಂತದ ಮತಾಂತರ ಯತ್ನದ ಬಗ್ಗೆ ಟಿಸಿಎಸ್‌ ನಾಸಿಕ್‌ ಘಟಕದ ಮಹಿಳಾ ಇಂಜಿನಿಯರ್‌ ಮತ್ತಷ್ಟು ವಿವರವನ್ನು ಬಿಚ್ಚಿಟ್ಟಿದ್ದಾರೆ.

ಮಹಿಳಾ ಉದ್ಯೋಗಿಗಳ ಮೇಲಿನ ಲೈಂಗಿಕ ಶೋಷಣೆ, ಮಾನಸಿಕ ಕಿರುಕುಳ, ಬಲವಂತದ ಮತಾಂತರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ 9 ಪ್ರಕರಣಗಳನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ.

ಕಾರ್ಯಾಚರಣೆ ವಿಭಾಗದ ವ್ಯವಸ್ಥಾಪಕಿ ಸೇರಿದಂತೆ ಎಂಟು ಜನರನ್ನು ಎಸ್‌ಐಟಿ ಬಂಧಿಸಿದೆ.

ಪ್ರಕರಣದ ಬಗ್ಗೆ ಮತ್ತಷ್ಟು ವಿವರ ಬಹಿರಂಗಪಡಿಸಿರುವ ಸಂತ್ರಸ್ತೆ, 'ಐವರು ಆರೋಪಿಗಳು 2025ರ ಜೂನ್‌ನಿಂದ 2026ರ ಮಾರ್ಚ್‌ವರೆಗೆ ನನ್ನ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯ ನಡೆಸಿದ್ದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದರು' ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

'ಒಬ್ಬ ಆರೋಪಿ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ. ಮಹಿಳೆಯರು ಬುರ್ಖಾ ಧರಿಸದ ಕಾರಣಕ್ಕೆ ಅತ್ಯಾಚಾರಗಳು ನಡೆಯುತ್ತವೆ ಎಂದು ಹೇಳಿದ್ದರು. ತರಬೇತಿ ಸಂದರ್ಭದಲ್ಲಿ ತಂಡದ ಮುಖ್ಯಸ್ಥ ಅನುಚಿತವಾಗಿ ವರ್ತಿಸಿದ್ದರು. ಗುಡಿ ಪಡವಾ ಸಂಭ್ರಮಾಚರಣೆ ಸಂದರ್ಭದಲ್ಲಿ ಮತ್ತೊಬ್ಬ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದ. ದಾಂಪತ್ಯ ಜೀವನದ ಬಗ್ಗೆಯೂ ಅವಹೇಳನಕಾರಿಯಾಗಿ ಮಾತನಾಡಿದ್ದರು' ಎಂದು ದೂರಿದ್ದಾರೆ.

'ಕೇವಲ ಕಚೇರಿಯಲ್ಲಿ ಮಾತ್ರವಲ್ಲದೆ, ಸಾಮಾಜಿಕ ಮಾಧ್ಯಮದ ಮೂಲಕವೂ ಕಿರುಕುಳ ನೀಡಿದ್ದರು' ಎಂದು ಆರೋಪಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries