ಕಾಸರಗೋಡು: ನಗರದ ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಕ್ಷೇತ್ರದ ಬ್ರಹ್ಮಕಲಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏ.12 ರಂದು ಬೆಳಗ್ಗೆ 9ಕ್ಕೆ ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಕ್ಷೇತ್ರ ವಠಾರದಲ್ಲಿ ನಡೆಯಲಿದೆ.
ಕಾಸರಗೋಡು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ಹಾಗೂ ಪ್ರಸಾದ್ ನೇತ್ರಾಲಯ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಶಿಬಿರ ನಡೆಯಲಿದ್ದು, ತಜ್ಞ ವೈದ್ಯರು ತಪಾಸಣೆ ನಡೆಸುವರು. ಆಸಕ್ತರು ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದೆಂದು ಸಂಘಟಕರು ತಿಳಿಸಿದ್ದಾರೆ.


