HEALTH TIPS

ಕಾಂಗ್ರೆಸ್, ಸಮಾಜವಾದಿ ಪಕ್ಷವನ್ನು 'ಗೋಸುಂಬೆ'ಗೆ ಹೋಲಿಸಿದ ಮಾಯಾವತಿ

ನವದೆಹಲಿ: ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ವಿರುದ್ಧ ಶುಕ್ರವಾರ ಹರಿಹಾಯ್ದ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ಮುಖ್ಯಸ್ಥೆ ಮಾಯಾವತಿ, ಜಾತಿ ಮತ್ತು ಮಹಿಳಾ ಮೀಸಲಾತಿ ವಿಷಯಗಳಲ್ಲಿ ಅವುಗಳ ನಿಲುವುಗಳನ್ನು ''ಗೋಸುಂಬೆ''ಗೆ ಹೋಲಿಸಿದ್ದಾರೆ.

ನಾರಿ ಶಕ್ತಿ ವಂದನ್ ಅಧಿನಿಯಮ, 2023 ಮತ್ತು ಕ್ಷೇತ್ರ ಪುನರ್ವಿಂಗಡಣೆ ಕುರಿತ ಮಸೂದೆಗಳ ಮೇಲೆ ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿರುವ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ.

ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳು (ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಕಾಂಗ್ರೆಸ್ ಐತಿಹಾಸಿಕವಾಗಿ ವಿಫಲವಾಗಿದೆ ಎಂದು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಹಾಕಿದ ಸಂದೇಶವೊಂದರಲ್ಲಿ ಮಾಯಾವತಿ ಆರೋಪಿಸಿದ್ದಾರೆ.

''ದೇಶದ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಸಾಂವಿಧಾನಿಕ/ಕಾನೂನು ಹಕ್ಕುಗಳು ಮುಂತಾದ ವಿಷಯಗಳಲ್ಲಿ ಕಾಂಗ್ರೆಸ್ ತನ್ನ ಬಣ್ಣವನ್ನು ಗೋಸುಂಬೆಯಂತೆ ಬದಲಾಯಿಸುತ್ತದೆ. ಈ ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ, ಯಾವುದೇ ಕ್ಷೇತ್ರದಲ್ಲಿ ಈ ವರ್ಗಗಳ ಮೀಸಲಾತಿಯನ್ನು ಜಾರಿಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ. ಈಗ ಅದು ಮಹಿಳಾ ಮೀಸಲಾತಿಯಲ್ಲಿ ಈ ವರ್ಗಗಳಿಗೆ ಮೀಸಲಾತಿ ನೀಡುವ ಬಗ್ಗೆ ಮಾತನಾಡುತ್ತಿದೆ'' ಎಂದರು.

ಅದೇ ರೀತಿ, ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿದ್ದಾಗ ಸಮಾಜವಾದಿ ಪಕ್ಷವು ಜಾತಿ ಸಂಬಂಧಿ ನೀತಿಗಳನ್ನು ಜಾರಿಗೆ ತರುವಲ್ಲಿ ಸ್ಪಷ್ಟತೆಯನ್ನು ಹೊಂದಿರಲಿಲ್ಲ ಎಂಬುದಾಗಿಯೂ ಮಾಯಾವತಿ ಆರೋಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries