ಕೊಲ್ಕೋತ: ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ ಭಾರತೀಯ ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕೇಂದ್ರ ಸಚಿವ ಕಿರಣ್ ರಿಜಿಜು ಸೇರಿದಂತೆ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರಿದ್ದಾರೆ.
ಟೆನಿಸ್ ತಾರೆ ಲಿಯಾಂಡರ್ ಪೇಸ್ ಇತ್ತೀಚೆಗೆ ಕೋಲ್ಕತ್ತಾದಲ್ಲಿ ಬಿಜೆಪಿ ಮುಖ್ಯಸ್ಥ ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದರು, ಇದು ಅವರು ಪಕ್ಷ ಸೇರುವ ಬಗ್ಗೆ ಊಹಾಪೋಹಗಳಿಗೆ ಕಾರಣವಾಯಿತು.
ಪೇಸ್ 2021 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು ಮತ್ತು 2022 ರಲ್ಲಿ ಗೋವಾ ಚುನಾವಣೆಯ ಸಮಯದಲ್ಲಿ ಪಕ್ಷಕ್ಕಾಗಿ ಪ್ರಚಾರ ಮಾಡಿದ್ದರು. ಆದರೆ ಅವರು ಚುನಾವಣೆಯಲ್ಲಿ ಸ್ಪರ್ಧಿಸರಲಿಲ್ಲ.

