ಕೋಲ್ಕತ್ತಾ: ಸುಳ್ಳು ಪ್ರಮಾಣ ಪತ್ರಗಳ ಮೂಲಕ ಭವಾನಿಪುರದಲ್ಲಿ ನನ್ನ ಉಮೇದುವಾರಿಕೆಯನ್ನು ಅಸಿಂಧುಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ಪಶ್ಚಿಮ ಮೇದಿನಿಪುರ ಜಿಲ್ಲೆಯ ಕೇಶಿಯಾರಿನಲ್ಲಿ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.
ಚುನಾವಣಾ ಆಯೋಗದ ಸಹಾಯದಿಂದ ನನ್ನ ವಿರುದ್ಧ ಎರಡು ಸುಳ್ಳು ಪ್ರಮಾಣ ಪತ್ರವನ್ನು ಸಲ್ಲಿಸುವ ಮೂಲಕ ಭವಾನಿಪುರದಲ್ಲಿ ಉಮೇದುವಾರಿಕೆಯನ್ನು ಅಸಿಂಧುಗೊಳಿಸಲು ಬಿಜೆಪಿ ಪ್ರಯತ್ನಿಸಿತ್ತು. ಆದರೆ, ಅವರ ರಣನೀತಿಯನ್ನು ನಾವು ವಿಫಲ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಪ್ರತಿಸ್ಫರ್ಧಿಯಾಗಿದ್ದಾರೆ.
ಪ್ರಜಾಪ್ರಭುತ್ವ ರೀತಿಯ ಚುನಾವಣೆಯ ಮೂಲಕ ಗೆಲುವು ಸಾಧಿಸಲು ಸಾಧ್ಯವಿಲ್ಲವೆಂದು, ಬಿಜೆಪಿಯು ಚುನಾವಣಾ ಆಯೋಗದ ಸಹಾಯದಿಂದ ಎಸ್‌ಐಆರ್ ಮೂಲಕ ಬಲವಂತವಾಗಿ 90 ಲಕ್ಷ ಮತದಾರರನ್ನು ಮತಪಟ್ಟಿಯಿಂದ ತೆಗೆದುಹಾಕಿದೆ. ಅದರಲ್ಲಿ 60 ಲಕ್ಷ ಹಿಂದೂಗಳು ಹಾಗೂ 30 ಲಕ್ಷ ಮುಸ್ಲಿಮರಿದ್ದಾರೆ ಎಂದು ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಏ.23 ಹಾಗೂ ಏ.29ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೇ.4ರಂದು ಮತ ಎಣಿಕೆ ಪ್ರಕ್ರಿಯೆ ಜರಗಲಿದೆ.

