ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಳತ್ತೂರು ನಿವಾಸಿ ಅಬೂಬಕ್ಕರ್ ಎಂಬವರ ಪತ್ನಿ ಆಮಿನ (70) ಅವರ ಮೃತದೇಹ ಮನೆಯೊಳಗೆ ಜೀರ್ಣಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಿಮೆಂಟ್ ಶೀಟ್ ಹೊದಿಸಿದ ಪುಟ್ಟ ಮನೆಯಲ್ಲಿ ಆಮಿನ ವಾಸಿಸುತ್ತಿದ್ದು, ಮಂಗಳವಾರ ಬೆಳಿಗ್ಗೆ ಮನೆಯೊಳಗಿನಿಂದ ದುರ್ನಾತ ಬೀರುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೆÇಲೀಸರಿಗೆ ಮಾಹಿತಿ ನೀಡಿದ್ದರು. ಪೆÇಲೀಸರು ತಲುಪಿ ತಪಾಸಣೆ ನಡೆಸಿದಾಗ ಮೃತದೇಹ ಮನೆಯೊಳಗೆ ಮಂಚದಲ್ಲಿ ಮಲಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ನಾಲ್ಕು ದಿನಗಳ ಹಿಂದೆ ಸಾವು ಸಂಭವಿಸಿರಬೇಕೆಂದು ಸಂಶಯಿಸಲಾಗಿದೆ. ಮನೆಯ ಮುಂಭಾಗ ಹಾಗೂ ಹಿಂಭಾಗದ ಬಾಗಿಲುಗಳು ತೆರೆದಿಟ್ಟ ಸ್ಥಿತಿಯಲ್ಲಿದ್ದವೆಂದು ಪೆÇಲೀಸರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷಾ ವರದಿ ಲಭಿಸಿದ ಬಳಿಕವೇ ಸಾವಿಗೆ ಕಾರಣವೇನೆಂದು ಖಚಿತಪಡಿಸಲು ಸಾಧ್ಯವಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.

