HEALTH TIPS

ಅಬಕಾರಿ ನೀತಿ ಹಗರಣ: ಹೈಕೋರ್ಟ್​ನಲ್ಲಿ ವಾದ ಮಂಡಿಸಲಿರುವ ಅರವಿಂದ ಕೇಜ್ರಿವಾಲ್

 ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ (ಏ.06) ನ್ಯಾಯಾಲಯದ ಮುಂದೆ ವೈಯಕ್ತಿಕವಾಗಿ ವಾದ ಮಂಡಿಸಲಿದ್ದಾರೆ ಎಂದು ಆಪ್ ತಿಳಿಸಿದೆ.


ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಮಾರ್ಚ್ 30ರಂದು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸ್ವತಃ ಹೈಕೋರ್ಟ್​ನಲ್ಲಿ ಕೇಜ್ರಿವಾಲ್ ವಾದ ಮಾಡಲಿದ್ದಾರೆ.

ಈ ಹಿಂದೆ ಪಶ್ಚಿಮ ಬಂಗಾಳದಲ್ಲಿನ ಎಸ್​ಐಆರ್ ಪ್ರಕ್ರಿಯೆ ವಿರೋಧಿಸಿ ಸುಪ್ರೀಂಕೋರ್ಟ್​ನಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರು ವಾದ ಮಂಡಿಸಿದ್ದರು.

ಅಬಕಾರಿ ನೀತಿ ಪ್ರಕರಣದ ತನಿಖೆಯ ಸಮಯದಲ್ಲಿ ನೋಟಿಸ್‌ಗೆ ಉದ್ದೇಶಪೂರ್ವಕವಾಗಿಯೇ ಪ್ರತಿಕ್ರಿಯಿಸಿಲ್ಲ ಎಂಬ ಆರೋಪಕ್ಕೆ ಸಂಬಂಧಿಸಿದ ಕೇಜ್ರಿವಾಲ್ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಸಹ ಇಡಿ ಅರ್ಜಿಯಲ್ಲಿ ಪ್ರಶ್ನಿಸಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries