HEALTH TIPS

"ಚುನಾವಣೆಯ ಅಗತ್ಯವಾದರೂ ಏನಿದೆ?": ಚುನಾವಣಾ ಆಯೋಗಕ್ಕೆ ಕಪಿಲ್ ಸಿಬಲ್ ತರಾಟೆ

ನವದೆಹಲಿ: ಚುನಾವಣಾ ಆಯೋಗದ ಮೇಲೆ ಗುರುವಾರ ತೀಕ್ಷ್ಣ ವಾಗ್ದಾಳಿ ನಡೆಸಿರುವ ಮಾಜಿ ಕಾನೂನು ಸಚಿವ ಕಪಿಲ್ ಸಿಬಲ್, "ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ ಮತ ಹಕ್ಕು ನಿರಾಕರಣೆಯ ಪ್ರಯೋಗ ನಡೆಸುತ್ತಿದೆ" ಎಂದು ಆರೋಪಿಸಿದ್ದಾರೆ. "ಅಂದಮೇಲೆ ಚುನಾವಣೆಯ ಅಗತ್ಯವಾದರೂ ಏನಿದೆ?" ಎಂದು ಅವರು ಪ್ರಶ್ನಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜ್ಯಸಭಾ ಸಂಸದರೂ ಆದ ಕಪಿಲ್ ಸಿಬಲ್, ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಪುರಸ್ಕರಿಸಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಪಿಲ್ ಸಿಬಲ್, "ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮತ ಹಕ್ಕು ನಿರಾಕರಣೆಯ ಪ್ರಯೋಗ ನಡೆಸುತ್ತಿದೆ. ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಪುರಸ್ಕರಿಸಲೇಬೇಕು!" ಎಂದು ಛೇಡಿಸಿದ್ದಾರೆ.

"ನನ್ನ ಪ್ರಶ್ನೆ: ಚುನಾವಣೆಯ ಅಗತ್ಯವಾದರೂ ಏನಿದೆ?" ಎಂದೂ ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ತೀವ್ರವಾಗಿ ಧ್ರುವೀಕರಣಗೊಂಡಿರುವ ಪಶ್ಚಿಮ ಬಂಗಾಳದಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಭ್ರಷ್ಟಾಚಾರ, ನಿರುದ್ಯೋಗದಂತಹ ವಿಷಯಗಳ ಜಾಗವನ್ನು ಗುರುತು, ನಾಗರಿಕತ್ವ ಹಾಗೂ ಮತಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿರುವ ವಿವಾದ ಆಕ್ರಮಿಸಿರುವುದು ಈ ಬಾರಿಯ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ವಿಶೇಷವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries