ಕಾಸರಗೋಡು: ನಗರದ ನುಳ್ಳಿಪ್ಪಾಡಿಯ ಬಹುಅಂತಸ್ತಿನ ಕಟ್ಟಡ ನಿರ್ಮಾಣಕ್ಕಾಗಿ ಲಿಫ್ಟ್ ಅಳವಡಿಸಲು ನಿರ್ಮಿಸಲಾಗಿದ್ದ ಹೊಂಡದಲ್ಲಿ ಕರ್ನಾಟಕದ ವಲಸೆ ಕಾರ್ಮಿಕ, ಗದಗ ಜಿಲ್ಲೆಯ ಬಲೇಶ್ವರ ಬಾಲಹೊಸೂರು ನಿವಾಸಿ ಚಂದ್ರಶೇಖರ್ ಸುರೇಶ್ ಪಟ್ಟಾಡ್ (38) ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾಸರಗೋಡು ನಗರಠಾಣೆ ಪೆÇಲೀಸರು ಬಂಧಿಸಿದ್ದಾರೆ. ಧಾರವಾಡ ಕುಂದಗೋಳ ಕಲ್ಸಾ ನಿವಾಸಿ ಮಂಜುನಾಥ ಯಾನೆ ಮಂಜಪ್ಪ ಬಂಧಿತ.
ಮೃತದೇಹ ಪತ್ತೆಯಾದ ಸಂದರ್ಭ ಅಸಹಜ ಸಾವಿನ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಎಂದು ಸಾಬೀತಾದ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದಾಗ ಆರೋಪಿ ಬಗ್ಗೆ ಮಾಹಿತಿ ಲಭಿಸಿತ್ತು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾ ಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.


