HEALTH TIPS

ವಕೀಲೆ ಮೇಲೆ ಹಲ್ಲೆ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

 ನವದೆಹಲಿ: ವಕೀಲೆ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡು, ನಿರ್ದೇಶನ ನೀಡಿದೆ. 


ವಕೀಲೆಯ ಮೇಲೆ ಆಕೆಯ ಪತಿ ಸೋಮವಾರ (ಏ.27) ಕ್ರೂರವಾಗಿ ಹಲ್ಲೆ ನಡೆಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ತನಿಖೆಯನ್ನು ಹಿರಿಯ ಪೊಲೀಸ್ ಅಧಿಕಾರಿಗೆ, ಅದರಲ್ಲೂ ಎಸಿಪಿ ಅಥವಾ ಡಿಸಿಪಿ ದರ್ಜೆಯ ಮಹಿಳಾ ಅಧಿಕಾರಿಗೆ ವಹಿಸುವಂತೆ ದೆಹಲಿ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.

ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು, ಗಾಯಾಳುವಿಗೆ ಮೂರು ಆಸ್ಪತ್ರೆಗಳು ಪ್ರವೇಶ ನಿರಾಕರಿಸಿದ ವಿಚಾರವನ್ನೂ ತನಿಖಾಧಿಕಾರಿ ಪರಿಶೀಲಿಸಬೇಕೆಂದು ಸೂಚಿಸಿದೆ.

ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು, ಈ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಪ್ರಮುಖ ಆರೋಪಿಯನ್ನು ಏಪ್ರಿಲ್‌ 25 ಹಾಗೂ 26ರ ಮಧ್ಯರಾತ್ರಿ ಬಂಧಿಸಲಾಗಿದೆ ಎಂದು ಪೀಠಕ್ಕೆ ಮಾಹಿತಿ ನೀಡಿದರು.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries